ನಕಲಿ ಪತ್ರಕರ್ತರ ಹಾವಳಿಯಿಂದ ಪ್ರಾಮಾಣಿಕರಿಗೆ ಸಂಕಷ್ಟ : ಎಚ್.ಬಿ.ಮದನ್ಗೌಡಯೂಟ್ಯೂಬ್ ಹಾಗೂ ಪ್ರಚಲಿತದಲ್ಲಿ ಇಲ್ಲದ ಪತ್ರಿಕೆ ಹೆಸರು ಹೇಳಿಕೊಂಡು ಇಲಾಖೆಗಳ ನೌಕರರು ಅದರಲ್ಲೂ ಗ್ರಾಪಂ ಪಿಡಿಒಗಳ ವಿರುದ್ಧ ಆರ್‌ಟಿಐ ಅರ್ಜಿ ಸಲ್ಲಿಸಿ, ಸರ್ಕಾರಿ ಕೆಲಸಗಳಿಗೆ ಅಡ್ಡಿಪಡಿಸುವ ಜೊತೆಗೆ ಭ್ರಷ್ಟಾಚಾರ ನಡೆಸುತ್ತಿದ್ದು, ಇಂತಹ ಸಮಾಜಘಾತುಕ ಶಕ್ತಿಗಳಿಂದ ಪ್ರಾಮಾಣಿಕ ಪತ್ರಕರ್ತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ.ಮದನ್‌ಗೌಡ ಕಳವಳ ವ್ಯಕ್ತಪಡಿಸಿದರು.