• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಂತ್ ಶಾಲೆಯ ಮಕ್ಕಳಿಂದ ಗಾಂಧೀಜಿಯವರ ಪುಣ್ಯಸ್ಮರಣೆ
ಅನಂತ್ ಇಂಟರ್‌ನ್ಯಾಷನಲ್ ಶಾಲೆಯ ಮಕ್ಕಳು ಗಾಂಧೀಜಿಯವರ ಪುಣ್ಯಸ್ಮರಣೆಯ ಪ್ರಯುಕ್ತ ಕಸ್ತೂರ ಬಾ ಆಶ್ರಮದಲ್ಲಿ ಇರುವ ಗಾಂಧೀಜಿಯವರ ಸಮಾಧಿಗೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷ ಆರ್‌ ಅನಂತ ಕುಮಾರ್, ತಾಲೂಕಿನ ದಂಡಾಧಿಕಾರಿ ಸಂತೋಷ್ ಆಶ್ರಮದ ಉಪಪ್ರತಿನಿಧಿಯಾದ ಮೇರಿ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಶಾಲೆಯ ಸಂಸ್ಥಾಪಕ ಅಧ್ಯಕ್ಷ ಆರ್. ಅನಂತಕುಮಾರ್ ಮಾತನಾಡಿದರು.
ಮನುಷ್ಯತ್ವ ಇಟ್ಟುಕೊಂಡು ಸಾಲ ವಸೂಲಿ ಮಾಡಿ
ಮೈಕ್ರೋ ಫೈನಾನ್ಸ್‌ಗಳು ಸಾಲ ನೀಡಲು ಹಾಗೂ ಸಾಲ ವಸೂಲಾತಿ ಸಂದರ್ಭದಲ್ಲಿ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದರ ಜೊತೆಗೆ ಸಾಲಗಾರರಿಗೆ ತೊಂದರೆ ನೀಡದೆ ಮಾನವೀಯತೆಯಿಂದ ನಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸೂಚಿಸಿದ್ದಾರೆ. ಮೈಕ್ರೋ ಫೈನಾನ್ಸ್‌ಗಳು ಯಾವುದೇ ಅಡಮಾನ ಇಟ್ಟುಕೊಳ್ಳದೆ ವಾರ್ಷಿಕ ವರಮಾನ ನೋಡಿ ಸಾಲ ನೀಡಬೇಕು. ಸಾಲಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಕಂತು ಪಾವತಿಗೆ ಸಮಯಾವಕಾಶ ನೀಡಬೇಕು ಎಂದರು.
ಕಿಡಿಗೇಡಿಗಳು ಮುಚ್ಚಿದ್ದ ಮ್ಯಾನ್‌ಹೋಲ್‌ ಸ್ವಚ್ಛತೆ
ಕಿಡಿಗೇಡಿಗಳು ಬ್ಲಾಕ್ ಮಾಡಿದ್ದ ಯುಜಿಡಿ ಮ್ಯಾನ್ ಹೋಲ್‌ ಅನ್ನು ಪುರಸಭಾ ಅಧ್ಯಕ್ಷರ ಸೂಚನೆ ಮೇರೆಗೆ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು. ಯುಜಿಡಿ ನೀರು ದೇವಸ್ಥಾನದಿಂದ ಕೆಳಗಿನ ಹೊಳೆಬೀದಿಯ ಯುಜಿಡಿ ಯವರೆಗೂ ಹರಿಯುತ್ತದೆ. ಈ ರೀತಿ ಅನಾಗರಿಕರಂತೆ ವರ್ತಿಸಿ ಮ್ಯಾನ್ ಹೋಲ್ ಮುಚ್ಚುವುದು ಇಂತಹ ಕೆಲಸ ಮಾಡಿದರೆ ಸಾಕಷ್ಟು ತೊಂದರೆಯಾಗುವುದಲ್ಲದೆ ಯುಜಿಡಿ ಸಮಸ್ಯೆ ಇನ್ನಷ್ಟು ದೊಡ್ಡದಾಗುತ್ತದೆ. ಆದ್ದರಿಂದ ಯಾರೂ ಇಂತಹ ಕೆಲಸ ಮಾಡಬಾರದು. ಒಂದು ವೇಳೆ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿಕ್ಕೋಡಿನಲ್ಲಿ ತ್ಯಾಜ್ಯ ಸ್ವಚ್ಛತೆಗೆ ಗ್ರಾಪಂ ನಿರಾಸಕ್ತಿ
ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಟ್ಟಣ, ಬೀದಿಗಳ ನಿರ್ವಹಣೆಗೆ ದಿನಗೂಲಿ ನೌಕರನನ್ನು ನೇಮಿಸಿ ಸ್ವಚ್ಛತೆ ಮಾಡಲು ಬಿಟ್ಟಿದ್ದು ಬೇಕಾಬಿಟ್ಟಿ ಕೆಲಸ ಮಾಡಿ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದು ಕಬ್ಬುನಾರುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆಯಲ್ಲಿ ಅಲ್ಲದೆ ಗ್ರಾಮ ಪಂಚಾಯತಿ ಸುತ್ತಮುತ್ತಲ್ಲಿ ಕಸದ ರಾಶಿ ಕಂಡುಬರುತ್ತಿದೆ. ಬೀದಿಗಳಲ್ಲಿ ಸಾರ್ವಜನಿಕರು, ಶಾಲಾ ಮಕ್ಕಳು, ವಯಸ್ಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಎ.ಜೆ. ಸದಾಶಿವ ಆಯೋಗದ ವರದಿಯನ್ನು ನಾಗಮೋಹನ್ ದಾಸ್ ಆಯೋಗಕ್ಕೆ ಕೂಡಲೇ ಹಸ್ತಾಂತರಿಸಬೇಕು ಮತ್ತು ದತ್ತಾಂಶದ ವರದಿಯನ್ನು ಕೂಡಲೇ ಪಡೆದು ಒಳಮೀಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಾದಿಗ ದಂಡೋರ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ದೇಶವೇ ತಿರುಗಿ ನೋಡುವಂತೆ ರಾಷ್ಟ್ರದಲ್ಲೇ ಸಂಚಲ ಉಂಟುಮಾಡಿರುವ ಆದಿಜಾಂಭವ ಸಮಾಜದ ಕುಲತಿಲಕ ಮಂದಾಕೃಷ್ಣ ಮಾದಿಗ ಅವರಿಗೆ ಈ ಹೋರಾಟವನ್ನು ಅರ್ಪಣೆ ಮಾಡುತ್ತೇವೆ. ನೌಕರರೇ ಒಳಮೀಸಲಾತಿಯ ಮೊಟ್ಟಮೊದಲ ಫಲಾನುಭವಿಗಳು ಎಂದರು.
ಅಕ್ರಮ ಗುಡಿಸಲು ತೆರವುಗೊಳಿಸಲು ಒತ್ತಾಯ
ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಗೆ ಸೇರಿದ ಮಲ್ಲಾಪುರ ಗ್ರಾಮದಲ್ಲಿ ಸರ್ವೇ ನಂ:೧೩/ಪಿ೩ ರಲ್ಲಿ ೪ ಎಕರೆ ೨೦ ಗುಂಟೆ ಜಮೀನು ಇದ್ದು, ನಮ್ಮ ತಂದೆ ರುದ್ರಯ್ಯ ಬಿನ್ ಲೇಟ್ ಭೈರಯ್ಯ ರವರ ಹೆರಿನಲ್ಲಿದೆ. ಈ ಜಮೀನಿಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲಾತಿಗಳನ್ನು ಹೊಂದಿರುತ್ತೇವೆ. ಹೀಗಿದ್ದರೂ ಕೂಡ ಈ ಜಾಗಕ್ಕೆ ಅಕ್ರಮವಗಿ ಗುಡಿಸಲು ಹಾಕಲು ನಮ್ಮ ಗ್ರಾಮದವರೇ ಆದ ಓದೇಶ ಮತ್ತು ಭೈರಯ್ಯ ಎಂಬುವವರು ಮುಂದಾಗಿರುತ್ತಾರೆ ಎಂದು ದೂರಿದರು.
ಬೇಲೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪುರಸಭೆ ಅಧ್ಯಕ್ಷರ ಆಗ್ರಹ
ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಜಾಗವನ್ನು ಗುರುತಿಸಿ ಅಭಿವೃದ್ಧಿಪಡಿಸಲು ಸಿದ್ಧ ಎಂದು ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಸಲ್ಮಾ ಕೆ. ಪಾಹಿಮಾ ಹೇಳಿದರು. ಶುಕ್ರವಾರ ಬೇಲೂರು ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಇಲಾಖೆಗೆ ಸಂಬಂಧಿಸಿದ ಜಾಗಗಳನ್ನು ಗುರುತಿಸಿ ಬೇಲೂರು ದೇವಸ್ಥಾನ ವಿಶ್ವ ಪರಂಪರೆ ಪಟ್ಟಿಗೆ ಸೇರಿರುವುದರಿಂದ ಪ್ರವಾಸಿಗರು ಹೆಚ್ಚು ಬರುತ್ತಾರೆ. ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು, ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದರು.
ಸರ್ಕಾರಿ ಶಾಲೆ ಮಕ್ಕಳನ್ನು ಖಾಸಗಿ ಶಾಲಾ ಮಕ್ಕಳಂತೆ ತಯಾರು ಮಾಡಿ
ಖಾಸಗಿ ಶಾಲಾ ಮಕ್ಕಳಂತೆ ಸರ್ಕಾರಿ ಶಾಲೆಗಳ ಮಕ್ಕಳನ್ನು ಕೂಡ ತಯಾರು ಮಾಡಬೇಕು. ಜೊತೆಗೆ ಎಸ್ಸೆಸ್ಸಲ್ಸಿಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯಬೇಕು ಎಂಬುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಆರ್‌. ಪೂರ್ಣಿಮಾ ಕರೆ ನೀಡಿದರು. ಎಲ್ಲಾ ಮಕ್ಕಳಿಗೆ ಮತ್ತು ಪೋಷಕರಿಗೆ ಪತ್ರ ಬರೆದು ಅವರಿಗೆ ಒಂದು ಭರವಸೆ ಬರುವಂತೆ ಮಾಡಬೇಕು. ಮಕ್ಕಳು ಹೆಚ್ಚು ಗಣಿತ ಮತ್ತು ವಿಜ್ಞಾನದಲ್ಲಿ ಫೇಲ್‌ ಆಗುತ್ತಿದ್ದರೆ ಆ ವಿಷಯವನ್ನು ಶಿಕ್ಷಕರು ಹೆಚ್ಚು ಗಮನ ವಹಿಸಬೇಕೆಂದು ಕಿವಿಮಾತು ಹೇಳಿದರು.
ಯಾಂತ್ರೀಕರಣದ ಮೂಲಕ ಕೃಷಿಯಲ್ಲಿ ವೆಚ್ಚ ತಗ್ಗಿಸಿ
ಸಂಪೂರ್ಣ ಯಾಂತ್ರೀಕರಣದ ಮೂಲಕ ಭತ್ತದ ಬೇಸಾಯ ನಡೆಸುವುದರಿಂದ ವೆಚ್ಚವನ್ನು ನಿಯಂತ್ರಿಸಿ ಹೆಚ್ಚು ಇಳುವರಿ ಪಡೆಯಬಹುದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೃಷಿ ಮೇಲ್ವಿಚಾರಕ ಎಂ. ಸುನೀಲ್ ಕುಮಾರ್‌ ತಿಳಿಸಿದರು. ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ವೆಚ್ಚ ಮತ್ತು ವಾಣಿಜ್ಯ ಬೆಳೆಗಳ ಆಕರ್ಷಣೆಯಿಂದ ರೈತರು ಭತ್ತದ ಬೇಸಾಯದಿಂದ ವಿಮುಖರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ "ಯಂತ್ರಶ್ರೀ " ಯಾಂತ್ರೀಕರಣ ಯೋಜನೆಯ ಉಪಯೋಗ ಕುರಿತು ಗ್ರಾಮಾಭಿವೃದ್ಧಿ ಸಂಸ್ಥೆ ರೈತರಲ್ಲಿ ಅರಿವು ಮೂಡಿಸುವ ಕಾರ್ಯ ನಡೆಸಿದೆ ಎಂದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ: ಯುವನಿಧಿ ಯೋಜನೆಯ ಪೋಸ್ಟರ್‌ ಬಿಡುಗಡೆ

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯು ಸಮಿತಿಯ ಅಧ್ಯಕ್ಷ ಪೃಥ್ವಿ ಜಯರಾಮ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved