ಆಪರೇಷನ್ ವಿಕ್ರಾಂತ್ ಕಾರ್ಯಾಚರಣೆ ವಿಫಲಅಲೆಮಾರಿ ಕಾಡಾನೆ ವಿಕ್ರಾಂತ್‌ನನ್ನು ಹಿಡಿಯಲು ನಡೆಸಿದ ಆಪರೇಷನ್ ವಿಕ್ರಾಂತ್ ಕಾರ್ಯಾಚರಣೆ ವಿಫಲವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಜೊತೆಗೆ ಏಳು ಸಾಕಾನೆಗಳು ಭಾಗವಹಿಸಿದ್ದವು. ವಿಕ್ರಾಂತ್ ಆನೆ ಗುಂಪಿನಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದೆ. ವೈದ್ಯರು ಕಾಡಾನೆಗೆ ಚುಚ್ಚುಮದ್ದು ನೀಡಲು ಸತತ ಆರು ಗಂಟೆಗಳ ಹರಸಾಹಸಪಟ್ಟರು. ಕಾಡಾನೆ ಗುಂಪಿನೊಳಗೆ ಸೇರಿಕೊಂಡಿದ್ದರಿಂದ, ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ.