• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಶೈಕ್ಷಣಿಕ ಪ್ರಗತಿಯಿಂದ ಮಹಿಳೆ ಸಮಾಜದ ಮುಖ್ಯವಾಹಿನಿಗೆ
ಮಹಿಳೆಯರು ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು. ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬೆನ್ನೆಲುಬಾಗಿ ನಿಂತಿದೆ. ಕಳೆದ ೪೦ ವರ್ಷಗಳಿಂದ ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲಿ ಗ್ರಾಮ ಅಭಿವೃದ್ಧಿ ಯೋಜನೆ ವಿಸ್ತರಣೆಯಾಗಿ ೬.೫ ಲಕ್ಷ ಸ್ವಸಹಾಯ ಸಂಘಗಳ ಮೂಲಕ ೬೦ ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಸ್ವಾವಲಂಬಿ ಬದುಕು ಕಂಡುಕೊಂಡು, ಕುಟುಂಬದ ಆರ್ಥಿಕತೆಗೆ ಹೆಗಲೊಡ್ಡಿದ್ದಾರೆ.
ವಿಷ್ಣುಸಮುದ್ರದ ಕಲ್ಯಾಣಿ ಸ್ವಚ್ಛಗೊಳಿಸಲು ಒತ್ತಾಯ
ವಿಷ್ಣುಸಮುದ್ರ ಬಳಿ ಇರುವ ಕಲ್ಯಾಣಿ ನೀರು ಮಲಿನವಾಗಿದ್ದು, ಕೂಡಲೇ ಸ್ವಚ್ಛ ಮಾಡುವಂತೆ ಅಂದಲೆ ಗ್ರಾಮದ ಶ್ರೀ ಶನೇಶ್ವರಸ್ವಾಮಿ ದೇಗುಲದ ಪ್ರಧಾನ ಅರ್ಚಕ ಹಾಗೂ ಸಮಾಜಸೇವಕ ಆರ್‌.ಆರ್‌.ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ‌‌. ಚೆನ್ನಕೇಶವ ರಥೋತ್ಸವ ಸಂದರ್ಭದಲ್ಲಿ ಲಕ್ಷಾಂತರ ಜನರು ಕೂಡ ಇಲ್ಲಿ ಸ್ನಾನ ಮಾಡಲು ಬರುತ್ತಾರೆ. ಆದ್ದರಿಂದ ದೇಗುಲದ ಸಮಿತಿಯವರಾಗಲಿ, ದೇಗುಲದ ಕಾರ್ಯನಿರ್ವಾಹಣಾಧಿಕಾರಿ ಮತ್ತು ದೇವಸ್ಥಾನ ಧರ್ಮದರ್ಶಿಗಳು ಹಾಗೂ ಅರ್ಚಕರು ಗಮನಕ್ಕೆ ತೆಗೆದುಕೊಂಡು ಪೂಜೆ ಸಲ್ಲಿಸಿ ಶುದ್ಧೀಕರಣ ಕಾರ್ಯವನ್ನು ಆದಷ್ಟು ಬೇಗ ಮಾಡಲಿ ಎಂದು ಮನವಿ ಮಾಡಿದರು.
ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಇಲಾಖೆ ಡಿಡಿಯಿಂದ ಕಿರುಕುಳ
ಸುಮಾರು 490 ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರು ವಿನಾಕಾರಣ ನೋಟಿಸ್ ನೀಡುವ ಮೂಲಕ ಪಡಿತರ ಅಂಗಡಿ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದು, ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಸಹಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ.ಕೆ. ಕೃಷ್ಣಪ್ಪ ಆಗ್ರಹಿಸಿದರು. ಈ ಹಿಂದೆ ಹಾಸನಕ್ಕೆ ಬರುವ ಮುನ್ನವೇ ಅನೇಕ ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೂಡಲೇ ಜಿಲ್ಲಾಧಿಕಾರಿ ಬಗ್ಗೆ ಗಮನಹರಿಸಿ ಜೆಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಿಡಿಕಾರಿದರು.
ತರಕಾರಿ ವರ್ತಕರ ಸಂಘದಿಂದ ಶಿವಕುಮಾರ ಸ್ವಾಮಿಗಳ 6ನೇ ಪುಣ್ಯಸ್ಮರಣೆ
ನಡೆದಾಡುವ ದೇವರು ಶಿವಕುಮಾರಸ್ವಾಮೀಜಿಗಳ ೬ನೇ ಪುಣ್ಯಸ್ಮರಣೆಯ ಆಚರಣೆಯು ನಮ್ಮ ಸೌಭಾಗ್ಯವೆಂದು ವರ್ತಕ ದೇವರಾಜ್ ತಿಳಿಸಿದರು. ಪ್ರತಿದಿನ ೧೦ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಜತೆಗೆ ಮಠಕ್ಕೆ ಭೇಟಿ ನೀಡುವ ಸಾವಿರಾರು ಜನರಿಗೆ ನಿರಂತರ ಅನ್ನದಾಸೋಹ ನೀಡಲು ಸಾಮಾನ್ಯರಿಂದ ಸಾಧ್ಯವೇ ಇಲ್ಲ. ಇಂತಹ ಪೂಜ್ಯನೀಯ ಕಾರ್ಯವನ್ನು ಮಾಡಿದ ಮಹಾನ್ ಕಾಯಕಯೋಗಿ ಶಿವಕುಮಾರಸ್ವಾಮೀಜಿಗಳ ಸ್ಮರಣೆ ಜತೆಗೆ ಅನ್ನಸಂತರ್ಪಣೆ ಕಾರ್ಯದ ಮೂಲಕ ಗೌರವ ನಮನ ಸಲ್ಲಿಸುತ್ತೇವೆ ಎಂದರು.
ವಿರೂಪಾಕ್ಷಪುರ ಕೆರೆಗೆ ಸಂಸದ ಶ್ರೇಯಸ್ ಬಾಗಿನ ಅರ್ಪಣೆ
ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಹೋಬಳಿಯ ವಿರೂಪಾಕ್ಷಪುರ ಕೆರೆ ಸಂಪೂರ್ಣ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಸಂಸದ ಶ್ರೇಯಸ್ ಪಟೇಲ್ ಗಂಗೆಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ಗ್ರಾಮಸ್ಥರ ಹಲವು ವರ್ಷಗಳ ಒತ್ತಾಯದಂತೆ ಗ್ರಾಮಕ್ಕೆ ಸುಮಾರು 10 ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಾಣ ಮಾಡಲು ತಮ್ಮ ಸಂಸದರ ನಿಧಿಯಿಂದ ಅನುದಾನ ನೀಡಿದ್ದೇನೆ. ಮುಂಬರುವ ದಿನಗಳಲ್ಲೂ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಕೊಡುವುದಾಗಿ ಭರವಸೆ ನೀಡಿದರು.
ದನಗಳ ಜಾತ್ರಾ ಮಹೋತ್ಸವ ಪುನರಾರಂಭ
ಸ್ಥಗಿತಗೊಂಡಿದ್ದ ಶ್ರೀ ಚಂದ್ರಮೌಳೇಶ್ವರ ಸ್ವಾಮಿಯವರ ದನಗಳ ಜಾತ್ರಾ ಮಹೋತ್ಸವ, ಪುರಸಭೆ ವತಿಯಿಂದ ಪುನರಾಂಭ ಮಾಡಲಾಗುವುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು. , ಬರುವ ಉತ್ತಮ ರಾಸುಗಳಿಗೆ ಬಹುಮಾನ, ಕುಡಿಯುವ ನೀರು ವಿದ್ಯುತ್ ದೀಪ ನೆರಳಿನ ವ್ಯವಸ್ಥೆಯನ್ನು ಮೇವು ಕಲ್ಪಿಸಲಾಗಿದೆ. ಮೂರು ಹಂತದಲ್ಲಿ ತಳಿಗಳ ಆಧಾರದ ಮೇಲೆ ಬಹುಮಾನ ನೀಡುತ್ತಿದೆ. ರಾಸುಗಳನ್ನು ಜಾತ್ರೆಗೆ ಫೆಬ್ರವರಿ 7ರಿಂದ ತರಬೇಕು. ರಾಸುಗಳ ಆಯ್ಕೆ ೧೧ರಂದು ನಡೆಯಲಿದೆ.
ಮಲ್ಲಿಪಟ್ಟಣ ಏತ ನೀರಾವರಿ ಯೋಜನೆ ಕಾಮಗಾರಿ ಚುರುಕು
ಸದನದಲ್ಲಿ ಸರ್ಕಾರದ ಗಮನ ಸೆಳೆದ ಹಿನ್ನೆಲೆಯಲ್ಲಿ ನೆನಗುದಿಗೆ ಬಿದ್ದಿದ್ದ ಮಲ್ಲಿಪಟ್ಟಣ ಏತ ನೀರಾವರಿ ಯೋಜನೆಯ ಕಾಮಗಾರಿ ಚುರುಕುಗೊಂಡಿದ್ದು, ಮೂರು ತಿಂಗಳಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಎ. ಮಂಜು ತಿಳಿಸಿದರು. ಕೊಣನೂರು ಹೋಬಳಿಯ ಕೆಸವತ್ತೂರು ಗ್ರಾಮದ ಬಳಿಯಿಂದ 70 ಕೋಟಿ ರು. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿ ಪ್ರಾರಂಭವಾಗಲಿದ್ದು, 80 ಕಿ.ಮೀ. ವ್ಯಾಪ್ತಿಯ 53 ಕೆರೆ ಮತ್ತು 30 ಕಟ್ಟೆಗಳಿಗೆ ನೀರು ಹರಿಯಲಿದೆ. ಎರಡನೇ ಹಂತದ ಕಾಮಗಾರಿಯ ಪ್ರಸ್ತಾವನೆಯ ಅನುಮೋದನೆಗಾಗಿ ಕಾವೇರಿ ನೀರಾವರಿ ನಿಗಮದ ಬೋರ್ಡ್‌ ಸಭೆಯಲ್ಲಿ ಮಂಡನೆ ಮಾಡಲಾಗಿದೆ.
ಸಮಸಮಾಜ ನಿರ್ಮಾಣದ ಕನಸು ಬಿತ್ತಿದವರು ಅಂಬಿಗರ ಚೌಡಯ್ಯ
ಸಮ ಸಮಾಜದ ನಿರ್ಮಾಣದ ಕನಸು ಬಿತ್ತಿರುವ ಅಂಬಿಗರ ಚೌಡಯ್ಯ ಅವರ ಜೀವನದ ಬಗ್ಗೆ ನಮ್ಮ ಮುಂದಿನ ಪೀಳಿಗೆ ತಿಳಿಸುವಂತಹ ಕೆಲಸವಾಗಬೇಕು. ಶರಣರು ಮಾಡಿರುವ ಕ್ರಾಂತಿಯೂ ಇನ್ನೂ ಸಾಕಾರವಾಗಿಲ್ಲ, ಸಮ ಸಮಾಜ ಕಟ್ಟುವ ಕೆಲಸ ನಿರಂತರವಾಗಿ ಆಗಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ ಟಿ ಶಾಂತಲಾ ಹೇಳಿದ್ದಾರೆ. ಅಂಬಿಗರ ಚೌಡಯ್ಯ ಅವರ ಆಶಯದಂತೆ ಸಮಾನತೆಯ ಸಮಾಜವನ್ನು ಕಟ್ಟಲು ಸಣ್ಣ ಪ್ರತಿಜ್ಞೆಯನ್ನು ನಾವೆಲ್ಲರೂ ತೆಗೆದುಕೊಂಡರೆ ಮಾತ್ರ ಅಂಬಿಗರ ಚೌಡಯ್ಯ ಅವರಿಗೆ ನಾವು ಸಲ್ಲಿಸುವ ಗೌರವವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು.
ತ್ರಿವಿಧ ದಾಸೋಹಿ ಶಿವಕುಮಾರಸ್ವಾಮಿಗಳ 6ನೇ ಪುಣ್ಯಸ್ಮರಣೆ
ಶಿವಕುಮಾರ ಸ್ವಾಮೀಜಿಗಳ ಆದರ್ಶ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಶ್ರೀ ಜವೇನಹಳ್ಳಿ ಮಠದ ಮಠಾಧೀಶರಾದ ಸಂಗಮೇಶ್ವರ ಸ್ವಾಮೀಜಿ ಸಲಹೆ ನೀಡಿದರು. ನಾಡಿನ ಪುಣ್ಯಭೂಮಿಯಲ್ಲಿ ಅನೇಕ ಸಂತರು, ಶರಣರು, ತಪಸ್ವಿಗಳು, ಸಿದ್ಧಪುರುಷರು ತಮ್ಮ ಕಾಯಕದ ಮೂಲಕ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಬೆಳಗುತ್ತಿದ್ದಾರೆ. ಆದರೆ ಶಿವಕುಮಾರ ಸ್ವಾಮೀಜಿ ಬಡಮಕ್ಕಳಿಗೆ ಅನ್ನದಾಸೋಹ, ಅಕ್ಷರ, ಆಶ್ರಯ, ಕೊಟ್ಟು ಅವರ ಜೀವನದ ಬದುಕು ಪಾವನಗೊಳಿಸಿರುವ ಸ್ವಾಮೀಜಿವರ ನಡೆ, ನುಡಿ ನಮಗೆ ಮಾರ್ಗದರ್ಶನವಾಗಿದೆ ಎಂದರು.
ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ
ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಧನ್ಯಶ್ರೀ (20) ಆತ್ಮಹತ್ಯೆಗೆ ಶರಣಾದ ಮಹಿಳೆ. ಧನ್ಯಶ್ರೀ ಸಕಲೇಶಪುರ ತಾಲೂಕಿನ ಬ್ಯಾಕೆರೆಗಡಿ (ಜನ್ನಾಪುರ) ಗ್ರಾಮದವರು. ಎರಡು ವರ್ಷದ ಹಿಂದೆ ಹಳ್ಳಿಯೂರು ಗ್ರಾಮದ ಪ್ರೇಮ್‌ಕುಮಾರ್‌ನನ್ನು ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಒಂದು ವರ್ಷದಿಂದ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ ಎನ್ನುವ ಆರೋಪ ಪ್ರೇಮ್‌ ಕುಮಾರ್‌ ಮೇಲಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 509
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved