ವಿಜೃಂಭಣೆಯಿಂದ ನಡೆದ ಗಣಪತಿ ವಿಸರ್ಜನಾ ಮಹೋತ್ಸವಸಾರ್ವಜನಿಕ ಸಮುದಾಯ ಭವನದಲ್ಲಿ ಶ್ರೀ ಮಹಾಗಣಪತಿ ಮಹೋತ್ಸವ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ್ದ ೬೭ನೇ ವರ್ಷದ ಶ್ರೀ ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವವು ಶಾಸಕ ಎಚ್.ಡಿ.ರೇವಣ್ಣ ಉಪಸ್ಥಿತಿಯಲ್ಲಿ ಶನಿವಾರ ಮಧ್ಯಾಹ್ನ ವಿಜೃಂಭಣೆಯಿಂದ ಜರುಗಿತು. ಶ್ರೀ ಸ್ವಾಮಿಯ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿದ್ದ ರಥದಲ್ಲಿ ಪ್ರತಿಷ್ಠಾಪಿಸಿ, ಪೂಜಾ ಕೈಂಕರ್ಯ ನೆರವೇರಿಸಿ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಿವಿಧ ಕಲಾ ತಂಡಗಳ ಪ್ರದರ್ಶನದೊಂದಿಗೆ ಮೆರವಣಿಗೆ ನಡೆಸಿ, ಹೇಮಾವತಿ ನದಿಯಲ್ಲಿ ತೆಪ್ಪೋತ್ಸವ ನಡೆಸಿ, ಶ್ರೀಸ್ವಾಮಿಯ ಮೂರ್ತಿಯನ್ನು ವಿಸರ್ಜಿಸಲಾಯಿತು.