ಶ್ರವಣಬೆಳಗೊಳದಲ್ಲಿ ಪಾರಂಪರಿಕ ಗುರುಕುಲಕ್ಕೆ ಭೂಮಿಪೂಜೆನಮ್ಮ ಸಂಸ್ಕೃತಿ, ಪರಂಪರೆ, ಸಿದ್ಧಾಂತ, ಆಚಾರ-ವಿಚಾರಗಳು ಹಾಗೂ ಕೃಷಿ, ಧಾರ್ಮಿಕ ಪೂಜಾ ವಿಧಿ-ವಿಧಾನ, ಸಾಧುಗಳ ಸೇವೆ ಮಾಡುವುದರೊಂದಿಗೆ ಎಲ್ಲಾ ರೀತಿಯ ಭಾರತೀಯ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಪಾರಂಪರಿಕ ಗುರುಕುಲವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಶ್ರವಣಬೆಳಗೊಳ ಶ್ರೀ ದಿಂಗಂಬರ ಜೈನ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿದರು. ೧೯೨೮ರಲ್ಲಿ ಇಲ್ಲಿನ ಗುರುಗಳಾಗಿದ್ದ ನೇಮಿಸಾಗರವರ್ಣಿ ಚಾರುಕೀರ್ತಿ ಸ್ವಾಮಿಗಳು ಜೈನ ಸಂಸ್ಕೃತ ವೇದ ಮಹಾ ಪಾಠಶಾಲೆ ಎಂಬ ಬೃಹತ್ ಗುರುಕುಲವನ್ನು ತೆರೆದಿದ್ದರು. ಅಲ್ಲದೇ ದೇಶಾದ್ಯಂತ ಅನೇಕ ಗುರುಕುಲಗಳನ್ನು ತೆರೆದು ವಿದ್ಯಾಭ್ಯಾಸಕ್ಕೆ, ಮಹಿಳೆಯರ ಶಿಕ್ಷಣಕ್ಕೆ ಮಹತ್ವ ನೀಡಿದ್ದರು.