ಕಾರ್ಮಿಕರ ಸಾವಿಗೆ ಸ್ಪಂದಿಸದ ಜಿಲ್ಲಾಡಳಿತಬೇಲೂರು ಬಸ್ ನಿಲ್ದಾಣ ಮುಂಭಾಗ ಖಾಸಗಿ ವಾಣಿಜ್ಯ ಕಟ್ಟಡದ ಸಜ್ಜಾ ಕುಸಿದು ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಬಗ್ಗೆ ಸೋಮವಾರ ಅಧಿವೇಶನದ ಶೂನ್ಯ ವೇಳೆಯಲ್ಲಿ ಬೇಲೂರು ಶಾಸಕ ಎಚ್ ಕೆ ಸುರೇಶ್ ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರಲ್ಲದೆ ಆ ಸಮಯದಲ್ಲಿ ಸೂಕ್ತವಾಗಿ ಸ್ಪಂದಿಸದ ಜಿಲ್ಲಾಡಳಿತದ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಮೌನವಾಗಿದ್ದಾರೆ. ಜಿಲ್ಲಾ ಸಚಿವರಂತೂ ಹೊರಗಡೆ ಇರುತ್ತಾರೆ, ಆದರೆ ಜಿಲ್ಲೆಯಲ್ಲಿ ಇದ್ದ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಯಾಕೆ ಭೇಟಿ ನೀಡಲಿಲ್ಲ, ರಾಜ್ಯ ಸರ್ಕಾರದವರು ಹಾಸನ ಜಿಲ್ಲೆಯನ್ನು ಹೊರಗಿಟ್ಟು ರಾಜ್ಯಭಾರ ಮಾಡುತ್ತಿದ್ದೀರಾ ಎಂದು ಕಿಡಿಕಾರಿದರು.