ಗಮನ ಸೆಳೆದ ಕಲಾತಂಡಗಳ ಮೆರವಣಿಗೆಹಾಸನಾಂಬ ಕಲಾಕ್ಷೇತ್ರ ಆವರಣದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶ‍್ರೀ ಆದಿಚುಂಚನಗಿರಿ ಹಾಸನ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು. ಕಾಗಿನೆಲೆ ಕನಕಗುರು ಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಬೆಂಗಳೂರಿನ ಶ್ರೀ ಸೌಮ್ಯನಾಥ ಸ್ವಾಮೀಜಿ, ಕಬ್ಬಳಿಯ ಶಿವಪುತ್ರನಾಥ ಸ್ವಾಮೀಜಿ, ಶ್ರೀ ಕೈಲಾಸಪತಿನಾಥ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಮೆರವಣಿಗೆಯುದ್ದಕ್ಕೂ ಹೆಜ್ಜೆ ಹಾಕಿದರು.