• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸ್ಟೆಲ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸ್ವರೂಪ್ ಚಾಲನೆ
ಎಸ್ಸಿ, ಎಸ್ಟಿ ಪೋಸ್ಟ್ ಮೆಟ್ರಿಕ್ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಎರಡು ಕೋಟಿ ರು. ವೆಚ್ಚದ ಹೆಚ್ಚುವರಿ ಕೊಠಡಿಗಳು, ಊಟದ ಹಾಲ್, ಅಡುಗೆ ಮನೆ ಸೇರಿದಂತೆ ಹೆಚ್ಚುವರಿ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಗುದ್ದಲಿ ಪೂಜೆ ಮಾಡುವುದರ ಮೂಲಕ ಚಾಲನೆ ನೀಡಿದರು. ಹೆಚ್ಚುವರಿ ೬ ಕೊಠಡಿ ಮತ್ತು ಡೈನಿಂಗ್ ಹಾಲ್ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆಯನ್ನು ಮಾಡಲಾಗಿದೆ. ಶೀಘ್ರದಲ್ಲಿಯೇ ಕಾಮಗಾರಿ ಮುಗಿದು ಹಾಸ್ಟೆಲಿನ ಮಕ್ಕಳಿಗೆ ಅನುಕೂಲವಾಗಲಿದೆ. ೨ ಕೋಟಿಯಲ್ಲಿ ಈಗಾಗಲೇ ೧ ಕೋಟಿ ರು. ಬಿಡುಗಡೆ ಆಗಿದ್ದು, ಉಳಿದ ಹಣವು ಕೂಡ ಶೀಘ್ರದಲ್ಲಿಯೇ ಬಿಡುಗಡೆ ಆಗಲಿದೆ.
ಪ್ಲೈವುಡ್‌ ಕಾರ್ಖಾನೆಗೆ ಬೆಂಕಿ ಅಪಾರ ಮರಗಳು ನಾಶ
ಹೊಳೆನರಸೀಪುರ ಪಟ್ಟಣದ ಕೈಗಾರಿಕೆ ಪ್ರದೇಶದಲ್ಲಿರುವ ಝಮ್ ಝಮ್ ಟಿಂಬರ್ಸ್‌ ಎಂಬ ಪ್ಲೈವುಡ್‌ ಫ್ಯಾಕ್ಟರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಪ್ರಮಾಣದ ಮರದ ದಿಮ್ಮಿಗಳು ಹಾಗೂ ಕತ್ತರಿಸಿ ಇಟ್ಟಿದ್ದ ಮರದ ತುಂಡುಗಳು ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿದೆ. ಬಿಸಿಲು ಹಾಗೂ ಒಣಗಿದ್ದ ಮರದ ಸಾಮಾನುಗಳಿಗೆ ಕಾಳ್ಗಿಚ್ಚಿನಂತೆ ಕ್ಷಣ ಮಾತ್ರದಲ್ಲಿ ಬೆಂಕಿ ಹರಡಿ ಕಾರ್ಖಾನೆಯಲ್ಲಿದ್ದ ಭಾರಿ ಪ್ರಮಾಣದ ಮರದ ದಿಮ್ಮಿಗಳು ಹಾಗೂ ಕತ್ತರಿಸಿ ಇಟ್ಟಿದ್ದ ಮರದ ದಿಮ್ಮಿಗಳು, ಪ್ಲೈವುಡ್‌ಗಳು ಸುಟ್ಟು ಹೋಗಿವೆ.
ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ
ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಜಮೆ ಮಾಡಬೇಕು ಮತ್ತು ಉಳಿದ ಗ್ಯಾರಂಟಿಗಳನ್ನು ಸಮರ್ಪಕವಾಗಿ ನೀಡುವಂತೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದಿಂದ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿದೆ. ಅಂತೆಯೇ ಪಂಚ ಗ್ಯಾರಂಟಿಗಳಲ್ಲಿ ಯಾವುದೇ ಲೋಪ ಆಗದಂತೆ ಪ್ರತೀ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡುವುದಾಗಿ ಬಣ್ಣದ ಮಾತುಗಳನ್ನೂ ಆಡಿತ್ತು. ಆದರೆ ಆರಂಭದಿಂದಲೂ ಪ್ರತಿ ತಿಂಗಳು ಅರ್ಹ ಫಲಾನುಭವಿಗಳ ಖಾತೆಗೆ ಹಣ ಹಾಕದೇ ಇರುವುದನ್ನು ಖಂಡಿಸುತ್ತೇವೆ ಎಂದರು.
ಕಠಿಣ ಪರಿಶ್ರಮವೊಂದೇ ಬದುಕಿನಲ್ಲಿ ಯಶಸ್ಸು ಗಳಿಸಲು ಮಾರ್ಗ
ಕಠಿಣ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಲು ಸಾಧ್ಯ ಎಂದು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಎಂ. ಮಮತಾ ಹೇಳಿದರು. ನಾವು ಓದಲು ಬಂದಿದ್ದೇವೆ, ಓದಬೇಕು ಎನ್ನುವ ಪ್ರಜ್ಞೆಯೊಂದಿಗೆ ನಿರಂತರ ಅಧ್ಯಯನ ನಡೆಸಿದಲ್ಲಿ ಯಶಸ್ಸಿನ ದಾರಿ ಸುಗಮವಾಗಲಿದೆ, ವಿದ್ಯಾರ್ಥಿಗಳು ಓದುವ ವಯಸ್ಸಿನಲ್ಲಿ ಕಾಲಹರಣ ಮಾಡಬಾರದು. ಅಮೂಲ್ಯವಾದ ಸಮಯವನ್ನು ಜ್ಞಾನಾರ್ಜನೆಗಾಗಿ ಮೀಸಲಿಟ್ಟು ಶ್ರದ್ಧೆಯಿಂದ ಕಲಿತುಕೊಳ್ಳಬೇಕು.
ನಾಳೆ ರಕ್ಷಿದಿಯಲ್ಲಿ ಕರೀಂಖಾನ್ ಪ್ರಶಸ್ತಿ ಪ್ರದಾನ
ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಪ್ರತಿಭಾನ್ವಿತರಿಗೆ ಪ್ರತಿವರ್ಷ ನೀಡಲಾಗುವ ಎಸ್.ಕೆ ಕರೀಂಖಾನ್ ಪ್ರಶಸ್ತಿ ೧೦ ಸಾವಿರ ನಗದು ಒಳಗೊಂಡಿರಲಿದೆ. ಯುವ ಸಾಹಿತಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ಅಮೃತ ಕಲಾ ಪ್ರಶಸ್ತಿ ಐದು ಸಾವಿರ ನಗದು ಒಳಗೊಂಡಿರಲಿದೆ. ಪ್ರಶಸ್ತಿ ಆಯ್ಕೆ ಸಮಿತಿ ನಿರ್ದೇಶನದಂತೆ ಈ ಬಾರಿ ಎಸ್.ಕೆ ಕರೀಂಖಾನ್ ಪ್ರಶಸ್ತಿ ಜನಪರ ನಿಲವಿನೊಂದಿಗೆ ರಂಗಕಾಯಕ ನಡೆಸುತ್ತಿರುವ ಹರಪನಹಳ್ಳಿ ತಾಲೂಕಿನ ಬಿ.ಪರಶುರಾಮ್ ಅವರಿಗೆ ನೀಡಲಾಗುತ್ತಿದೆ.
ಸರ್ಕಾರಿ ಶಾಲೆಗಳು ಉಳಿದರೆ ಕನ್ನಡವೂ ಉಳಿದೀತು
ಸರ್ಕಾರಿ ಶಾಲಾ- ಕಾಲೇಜುಗಳು ಉಳಿದರೆ ಮಾತ್ರ ಕನ್ನಡ ಭಾಷೆ ಬೆಳೆಯಲು ಸಾಧ್ಯ ಎಂದು ಹಾಸನ ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ಸರ್ಕಾರಿ ಶಾಲೆಗಳಲ್ಲಿ ಕನ್ನಡ ಭಾಷೆಯಲ್ಲಿ ಎಲ್ಲಾ ವಿಷಯಗಳನ್ನು ಕಲಿಯುತ್ತಾರೆ. ಇಂಗ್ಲೀಷ್ ಭಾಷೆಯನ್ನು ವಿಷಯವಾಗಿ ಕಲಿಯುತ್ತಾರೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಭವಿಷ್ಯ ರೂಪಿಸುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಸುಮಾರು ನೂರು ವರ್ಷದ ಶಾಲೆಗೆ 250ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ ಎಂದರೆ ಸಂತೋಷದ ವಿಚಾರ ಎಂದು ನುಡಿದರು.
ಮೊಬೈಲ್‌ಗಳನ್ನು ಯುವಜನತೆ ಒಳ್ಳೆಯ ಉದ್ದೇಶಕ್ಕಾಗಿ ಬಳಸಿ
ಇಂದಿನ ಯುವಜನತೆ ಮೊಬೈಲ್ ಬಳಸುವುದರಿಂದ ಆಗುವ ಅನಾನುಕೂಲಗಳು ಮತ್ತು ಹಿಂದಿನ ಯುವಜನತೆ ಅದನ್ನು ಒಳ್ಳೆಯ ಉದ್ದೇಶಕ್ಕಾಗಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದರ ಮುಖಾಂತರ ತಮ್ಮ ಗುರಿಗಳನ್ನು ಸಾಧಿಸಲು ಸಾಧ್ಯವಿದೆ. ಪೋಷಕರು ಮಕ್ಕಳ ನಡವಳಿಕೆ ಮೇಲೆ ನಿಗಾ ವಹಿಸುವ ಅವಶ್ಯಕತೆ ಇದೆ ಎಂದು ಎಂದು ಪಿಎಸ್‌ಐ ಕಿವಿಮಾತು ಹೇಳಿದರು.
ಭೂಮಿ ಫಲವತ್ತತೆ ಕಾಪಾಡಿಕೊಳ್ಳುವ ಪ್ರಯತ್ನಗಳಾಗಬೇಕು
ಮುಂಗಾರು ಮತ್ತು ಹಿಂಗಾರು ಮಳೆಗಳು ಕಾಲಕ್ಕೆ ತಕ್ಕನಾಗಿ ಆಗಮಿಸಿದಿದ್ದರೆ, ನರ್ಸರಿಗಳ ಮೂಲಕ ಪೋಷಿಸಲಾದ ಗಿಡಗಳು ಇನ್ನಿತರೇ ಉಪ ಕೃಷಿ ಬೆಳೆಗಳಿಗೆ ಸಹಾಯವಾಗಲಿದೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ವಿವಿಧ ಹಣ್ಣು ಹಂಪಲುಗಳ ಗಿಡಗಳನ್ನು ಬೆಳೆಸುವ ಜೋತೆಯಲ್ಲಿ ಆರೋಗ್ಯಕರ ಪ್ರಕೃತ್ತಿದತ್ತವಾದ ಕೀಟನಾಶಕಗಳನ್ನು ಬಳಸಲು ಮುಂದಾಗಬೇಕು. ಹುಳುಹುಪ್ಪಟೆ, ಕೀಟಗಳನ್ನು ನಾಶಪಡಿಸಲು ಕೀಟನಾಶಕಗಳನ್ನು ಉಪಯೋಗಿಸುವ ಜೊತೆಯಲ್ಲಿ ಭೂಮಿ ಫಲವತ್ತತೆ ಕಾಪಾಡಿಕೊಳ್ಳುವ ಬಗ್ಗೆಯೂ ಕೃಷಿಕರು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕು ಎಂದರು.
ಅಂತರ್ಜಲ ನಿರ್ವಹಣೆ ತರಬೇತಿ ಕಾರ್ಯಾಗಾರ
ಜಾವಗಲ್‌ನ ರೈತ ಸಂಪರ್ಕ ಕೇಂದ್ರದಲ್ಲಿ ಅಟಲ್ ಭೂ ಜಲ ಯೋಜನೆಯಡಿ ರೈತರಿಗೆ ಅಂತರ್ಜಲ ನಿರ್ವಹಣೆ, ಜಲಭದ್ರತಾ ಯೋಜನೆ ಸಿದ್ಧಪಡಿಸುವುದು, ನೀರಿನ ಬೇಡಿಕೆ ಕಡಿಮೆ ಮಾಡುವ ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳ ಕುರಿತು ಒಂದು ದಿನದ ಕಾರ್ಯಕ್ರಮವನ್ನು ಕೃಷಿ ಇಲಾಖೆ, ಡಿ.ಎ.ಟಿ.ಸಿ ಹಾಗೂ ಜಿಲ್ಲಾ ಕಾರ್ಯಕ್ರಮ ನಿರ್ವಹಣಾ ಘಟಕ, ಅಟಲ್ ಭೂ ಜಲ ಯೋಜನೆ, ಹಾಸನ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾಗಿತ್ತು. ರಾಜ್ಯ ಕಾರ್ಯಕ್ರಮ ನಿರ್ವಹಣಾ ಘಟಕದಿಂದ ಆಗಮಿಸಿದ ಪ್ರವೀಣ್‌ರವರು ಅಟಲ್ ಭೂ ಜಲ ಯೋಜನೆಯ ಮಹತ್ವ, ಧ್ಯೇಯೋದ್ದೇಶಗಳು ಹಾಗೂ ಜಲ ಭದ್ರತಾ ಯೋಜನೆ ತಯಾರಿಸುವ ಬಗ್ಗೆ ಮಾಹಿತಿ ನೀಡಿದರು.
ಅರೇಹಳ್ಳಿಯಲ್ಲಿ ಎಸ್ಸೆಸ್ಸೆಲ್ಸಿ ಅಣುಕು ಪರೀಕ್ಷೆ
ಅರೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಪರೀಕ್ಷಾ ಕೇಂದ್ರಗಳ ವ್ಯಾಪ್ತಿಗೆ ಸೇರಿರುವ ವಿವಿಧ ಶಾಲೆಯ ಸುಮಾರು 260 ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಣುಕು ಪರೀಕ್ಷೆಯನ್ನು ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲಿ ಎಂಬ ಉದ್ದೇಶದಿಂದ ಪಾಸಿಂಗ್ ಮತ್ತು ಸ್ಕೋರಿಂಗ್ ಎಂಬ ಎರಡು ಪ್ಯಾಕೇಜ್ ಮಾಡಿದ್ದು ಯಾವ ವಿದ್ಯಾರ್ಥಿ ಶಿಕ್ಷಣದಲ್ಲಿ ಹಿಂದುಳಿದಿದ್ದಾರೆ ಅವರ ಮೇಲೆ ನಿಗಾ ವಹಿಸಿ ಅವರಿಂದ ಉತ್ತಮ ಫಲಿತಾಂಶ ಪಡೆಯಲು ಹಾಗೂ ಉತ್ತಮ ಕಲಿಕಾ ಜ್ಞಾನವಿರುವ ವಿದ್ಯಾರ್ಥಿಗಳಿಂದ ಹೆಚ್ಚಿನ ಅಂಕಗಳಿಸಲು ಈ ಪ್ಯಾಕೇಜ್ ಸಹಕಾರಿಯಾಗಲಿದೆ ಎಂದರು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 553
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved