ಸರ್ಕಾರಿ ರಜಾ ದಿನಗಳಲ್ಲೂ ಕೆಲಸ ಮಾಡಬೇಕಾದ ಅನಿವಾರ್ಯತೆ ಬಹಳ ಒತ್ತಡದಿಂದ ಸರ್ಕಾರಿ ರಜಾ ದಿನಗಳಲ್ಲೂ ಅನಿವಾರ್ಯವಾಗಿ ಕೆಲಸ ಮಾಡಬೇಕಿದೆ ಎಂದು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪೃಥ್ವಿರಾಜ್ ಆರ್. ಬೇಸರದಿಂದ ನುಡಿದರು. ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ನಿರ್ಮಿಸಿದ್ದ ಪೆಂಡಾಲಿನಲ್ಲಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಿ, ಅನಿರ್ದಿಷ್ಟಾವಧಿ ಮುಷ್ಕರದ ನೇತೃತ್ವ ವಹಿಸಿ ಮಾತನಾಡಿದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಉತ್ತಮವಾದ ಪೀಠೋಪಕರಣ, ಅತ್ಯುತ್ತಮ ಮೊಬೈಲ್ ಫೋನ್, ಸಿಮ್ ಹಾಗೂ ಡೇಟಾ, ಗೂಗಲ್ ಕ್ರೋಮ್ ಬುಕ್ ಅಥವಾ ಲ್ಯಾಪ್‌ಟಾಪ್, ಪ್ರಿಂಟರ್, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ ಸಲ್ಲಿಸಿದರು.