ಹೊಳೆನರಸೀಪುರದ 23 ವಾರ್ಡ್‌ಗಳಲ್ಲೂ ಬೀದಿನಾಯಿಗಳ ಹಾವಳಿಹೊಳೆನರಸೀಪುರ ಪಟ್ಟಣದ ೨೩ ವಾರ್ಡ್‌ಗಳಲ್ಲೂ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಮಕ್ಕಳು, ವಯೋವೃದ್ಧರು ವಾಯುವಿಹಾರಕ್ಕೆ ತೆರಳುವ ನಾಗರಿಕರು, ಅಯ್ಯಪ್ಪಸ್ವಾಮಿ ಮಾಲಾಧಾರಿಗಳು, ಧನುರ್ಮಾಸ ವ್ರತಾಚಾರಣೆ ಮಾಡುವ ಭಕ್ತರು, ಸಾರ್ವಜನಿಕರು ತಿರುಗಾಡಲು ಹಾಗೂ ದ್ವಿಚಕ್ರ ವಾಹನಗಳ ಸವಾರರು ಜೀವ ಭಯದ ಸಂಕಷ್ಟದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸೂರನಹಳ್ಳಿಯಲ್ಲಿ ಬಾಲಾಜಿ ಎಂಬುವರ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಕೊಂದು ಹಾಕಿದೆ ಮತ್ತು ಆಶ್ರಯ ಬಡಾವಣೆಯಲ್ಲಿ ಬಾಲಕನೋರ್ವನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದ ಸಂದರ್ಭದಲ್ಲಿ ಸ್ಥಳೀಯರ ಸಮಯ ಪ್ರಜ್ಞೆಯಿಂದ ಬಾಲಕ ರಕ್ಷಣೆ ಮಾಡಲಾಗಿತ್ತು.