• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡ ಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ಸಿಗಲಿ
ಎಲ್ ಕೆ ಜಿ ,ಯುಕೆಜಿ ಹಂತದಿಂದಲೇ ಕನ್ನಡದ ಜೊತೆಯಲ್ಲಿ ಆಂಗ್ಲ ಭಾಷೆಯಲ್ಲಿ ಶಿಕ್ಷಣ ನೀಡುವಂತಹ ಕೆಲಸ ಆಗಬೇಕು ಎಂದು ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯಪಟ್ಟರು
ಕಲೆ ಬರಹಗಾರರನ್ನು ಲೋಕದಿಂದ ಪ್ರತ್ಯೇಕಿಸದಿರಲಿ
ಹೆಣ್ಣು ಅಡುಗೆ ಮನೆಗೆ ಸೀಮಿತ ಎಂಬ ಹಣೆಪಟ್ಟಿಯಿಂದ ಹೊರಬರಬೇಕೆಂದರೆ ಆಯಾ ಕಾಲಘಟ್ಟದ ಸತ್ಯಗಳಿಗೆ ದನಿಯಾದಾಗ ಬದಲಾವಣೆ ತರಲು ಸಾಧ್ಯ ಎಂದು ಲೇಖಕಿ ಎನ್.ಸಂಧ್ಯಾರಾಣಿ ಪ್ರತಿಪಾದಿಸಿದರು.
ಸೇವಾ ಮನೋಭಾವದ ಶಿಕ್ಷಣ ಸಂಸ್ಥೆಗಳು ವಿರಳ
ಇಂದು ಶಿಕ್ಷಣ ವಾಣಿಜ್ಯೋದ್ಯಮವಾಗಿ ಪರಿವರ್ತನೆಗೊಳ್ಳುತ್ತಿರುವ ಕಾಲಘಟ್ಟದಲ್ಲಿ, ಸೇವಾ ಮನೋಭಾವದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾರ್ವತಮ್ಮ ಶಾಲೆ ಶ್ಲಾಘನೀಯ ಎಂದು ನ್ಯಾಯವಾದಿ ಕೆ.ಎಸ್ ಲೋಕೇಶ್ ಕುಮಾರ್ ಅಭಿಪ್ರಾಯಪಟ್ಟರು. ಪೋಷಕರು ಮಗು ಮನೆಯಲ್ಲಿ ಏನು ಬರೆಯುವುದಿಲ್ಲ, ಓದುವುದಿಲ್ಲ ಎಂದು ಹೇಳಿದರೆ ಆ ಚಿಂತೆ ಬಿಡಿ ಅವರು ಇವತ್ತಲ್ಲ ನಾಳೆ ಬರೆಯುತ್ತಾರೆ. ಮಕ್ಕಳ ಮೇಲೆ ಒತ್ತಡವನ್ನು ಖಂಡಿತ ಹಾಕಬೇಡಿ. ನಿಮ್ಮ ಮಗು ಚೆನ್ನಾಗಿ ಓದುತ್ತದೆ ನಮಗೆ ಸ್ಪಂದಿಸುತ್ತಿದೆ ಎಂದು ಹೇಳಿ ಕಳುಹಿಸುತ್ತಾರೆ ಎಂದರು.
ಸರಿಯಾಗಿ ಪಡಿತರ ವಿತರಣೆ ಮಾಡದಿದ್ದರೆ ಕ್ರಮ
ನ್ಯಾಯಬೆಲೆ ಅಂಗಡಿ, ಸಕಲೇಶಪುರ, ಪಡಿತರ, Fair Price Shop, Sakaleshpur, Rationನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರ ನೀಡುವ ಆಹಾರ ಧಾನ್ಯಗಳನ್ನು ಸರಿಯಾಗಿ ವಿತರಣೆ ಮಾಡದಿದ್ದಲ್ಲಿ ಅಂತಹ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಎಚ್ ಕೃಷ್ಣ ಹೇಳಿದರು. ಮಕ್ಕಳಿಗೆ ಮೊಟ್ಟೆ ವಿತರಣೆ ದಾಖಲಾತಿ ಸಂಗ್ರಹಿಸದ ಹಾಗೂ ದಾಸ್ತಾನು ಕುರಿತು ಮಾಹಿತಿ ನೀಡದ ಸಕಲೇಶಪುರ ತಾಲೂಕು ಆನೆಮಹಲ್‌ನ ಅಂಗನವಾಡಿ ಕಾರ್ಯಕರ್ತೆ ಎಂ.ವಿ.ರೇಷ್ಮಾ ಅವರನ್ನು ಗೌರವಧನ ಸೇವೆಯಿಂದ ಬಿಡುಗಡೆ ಮಾಡಲು ಆದೇಶಿಸಲಾಗಿದೆ ಎಂದರು.
ಪತ್ರಕರ್ತರ ಭವನದಲ್ಲಿ ಪತ್ರಕರ್ತ ಮುರುಳಿ ನಿಧನಕ್ಕೆ ಸಂತಾಪ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮುರುಳಿರವರು ನಿಧನರಾಗಿದ್ದು ನಮ್ಮ ಸಂಘಕ್ಕೆ ತುಂಬಾ ನೋವುಂಟು ಮಾಡಿದೆ. ಕಳೆದ ವಾರ ಸುರೇಶ್ ಅವರ ನಿಧನ ಮಾಸುವ ಮುನ್ನವೇ ಮತ್ತೊಂದು ಸಾವು ಸಂಭವಿಸಿದ್ದು, ತೀವ್ರ ದುಃಖವನ್ನು ವ್ಯಕ್ತ ಪಡಿಸುತ್ತಿದೆ ಮತ್ತು ಮೃತರ ಕುಟುಂಬ ಸದಸ್ಯರಿಗೆ ನಮ್ಮ ಸಂತಾಪವನ್ನು ತಿಳಿಸುತ್ತಿದೆ. ಅವರ ನಿಧನದಿಂದ ನಾವು ಒಬ್ಬ ನಿಪುಣ ಪತ್ರಕರ್ತನನ್ನು ಕಳೆದುಕೊಂಡಿದ್ದೇವೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಆಯೋಜಸಿದ್ದ ಪತ್ರಕರ್ತ ಮುರುಳಿ ನಿಧನಕ್ಕೆ ಸಂತಾಪ ಸೂಚಕ ಸಭೆಯಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಪೃಥ್ವಿ ಜಯರಾಮ್ ಹೇಳಿದರು.
ಆಧ್ಯಾತ್ಮಿಕ ಶಿಕ್ಷಣವು ಏಕಾಗ್ರತೆಯನ್ನು ಹೆಚ್ಚಿಸುವ ಸಾಧನ
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ "ಆಧ್ಯಾತ್ಮಿಕ ಚಿತ್ರ ಪಟ ಪ್ರದರ್ಶನ " ಕಾರ್ಯಕ್ರಮವು ಅದ್ಧೂರಿಯಾಗಿ ನಡೆಯಿತು. ಆಧ್ಯಾತ್ಮಿಕ ಶಿಕ್ಷಣವು ಏಕಾಗ್ರತೆಯನ್ನು ಹೆಚ್ಚಿಸುವ ಸಾಧನವಾಗಿದೆ. ವರ್ತಮಾನ ಸಮಯದಲ್ಲಿ ಜಗತ್ತಿನಲ್ಲಿ ಜಾತಿ ಧರ್ಮಗಳ ನಡುವೆ ಕಲಹ, ಅಶಾಂತಿ ಮತ ಭೇದಗಳು ಹೆಚ್ಚಾಗುತ್ತಿವೆ. ಜನರ ನಡುವೆ ವೈಷಮ್ಯ ಹೆಚ್ಚುತ್ತಿದೆ. ದುಃಖ ಕಾಯಿಲೆಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಜನರಿಗೆ ಈ ಆಧ್ಯಾತ್ಮಿಕ ರಾಜಯೋಗ ಶಿಕ್ಷಣವು ನಿಜವಾದ ಶಾಂತಿ ಮತ್ತು ಆನಂದವನ್ನು ಒದಗಿಸುತ್ತದೆ ಎಂದರು.
ಕುಶಾವರ ಗ್ರಾಪಂ ಅಧ್ಯಕ್ಷರಾಗಿ ಚಂದ್ರಕಲಾ ಅವಿರೋಧ ಆಯ್ಕೆ
ಕುಶಾವರ ಗ್ರಾಮ ಪಂಚಾಯ್ತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಗುಣ ಅವರ ವಿರುದ್ಧ ಎಲ್ಲಾ ಸದಸ್ಯರು ಅವಿಶ್ವಾಸ ನಿರ್ಣಯ ತಂದ ಹಿನ್ನೆಲೆಯಲ್ಲಿ ಚುನಾವಣೆ ನಿರ್ಣಯವಾಗಿತ್ತು. ೯ ಜನ ಸದಸ್ಯರ ಬಲ ಹೊಂದಿರುವ ಈ ಗ್ರಾಪಂನಲ್ಲಿ ಸಾಮಾನ್ಯ ಕ್ಷೇತ್ರದಿಂದ ಚಂದ್ರಕಲಾ ಒಬ್ಬರೆ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರನ್ನು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನಾಗಿ ಹೇಮರಾಜ್ ಅವರನ್ನು ಚುನಾವಣಾಧಿಕಾರಿ ತಾಪಂ ಇಒ ವಸಂತ್ ಕುಮಾರ್ ಘೋಷಿಸಿದರು.
ಶಿವನಂಜುಡೇಶ್ವರ ಪ್ರೌಢಶಾಲೆಗೆ ವಾಟರ್ ಫಿಲ್ಟರ್ ಕೊಡುಗೆ
ಶಿವನಂಜುಡೇಶ್ವರ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಬೇಲೂರು ವತಿಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕುಡಿಯುವ ಶುದ್ಧ ನೀರಿನ ವಾಟರ್ ಫಿಲ್ಟರ್ ಉದ್ಘಾಟಿಸಿ ಮಾತನಾಡಿದ ಶಂಭೋಗೌಡ, ಬೇಲೂರು ರೋಟರಿ ಕ್ಲಬ್ ಸಂಸ್ಥಾಪಕರಾದ ದಿವಂಗತ ಶ್ರೀ ಗಂಗಯ್ಯ ಹೆಗಡೆ ಅವರು ರೋಟರಿ ಸಂಸ್ಥೆಗೆ ನೀಡಿರುವ ಎಂಡೋಮೆಂಟ್ ಹುಡಿಕೆಯಿಂದ ಬರುವಂತಹ ಹಣದಲ್ಲಿ ಪ್ರತಿವರ್ಷ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ವಿದ್ಯಾರ್ಥಿಗಳು ಶುದ್ಧ ನೀರನ್ನು ಕುಡಿಯಬೇಕೆಂಬ ಅವರ ಆಸೆಯಂತೆ ಕುಡಿಯುವ ನೀರನ್ನು ಶುದ್ಧೀಕರಿಸುವ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡುತ್ತಿದ್ದೇವೆ ಎಂದು ಹೇಳಿದರು.
ಅಪಾರ ಭಕ್ತರ ಸಮ್ಮುಖದಲ್ಲಿ ಅದ್ಧೂರಿ ತುಳುಷಷ್ಠಿ ರಥೋತ್ಸವ
ಇಲ್ಲಿಯ ಕಾವೇರಿ ನದಿ ದಂಡೆಯಲ್ಲಿರುವ ಹಾಗೂ "ದಕ್ಷಿಣ ಕಾಶಿ " ಎಂದೇ ಪ್ರಖ್ಯಾತಿ ಹೊಂದಿರುವ ರಾಮನಾಥಪುರದ ಪ್ರಸನ್ನ ಶ್ರೀ ಸುಬ್ರಮಣ್ಯಸ್ವಾಮಿ ತುಳುಸೃಷ್ಟಿ ಮಹಾರಥೋತ್ಸವದಲ್ಲಿ ಇಲ್ಲಿಯ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಾನುವಾರ ಬಹಳ ಅದ್ಧೂರಿಯಾಗಿ ಮಹಾರಥೋತ್ಸವ ನೆರವೇರಿತು.
ಹೊನ್ನಮಾರನಹಳ್ಳಿಯಲ್ಲಿ ಶಾಲೆಯಲ್ಲಿ ವಾರ್ಷಿಕೋತ್ಸವ
ಸರ್ಕಾರಿ ಶಾಲೆಗಳ ಶಿಕ್ಷಕರುಗಳು ಉನ್ನತ ಮಟ್ಟದ ಶಿಕ್ಷಣ ಪಡೆದಿದ್ದು ಅದರ ಅನುಭವದಿಂದ ವಿದ್ಯಾರ್ಥಿಗಳನ್ನು ಸುಲಭ ರೀತಿಯಲ್ಲಿ ಶೈಕ್ಷಣಿಕ ವ್ಯವಸ್ಥೆಗೆ ಹೊಂದಾಣಿಕೆ ಮಾಡಿಸುತ್ತಾರೆ ಎಂದು ಪ್ರಾಧ್ಯಾಪಕ ಎಚ್. ಎನ್. ಬಸವರಾಜ್ ತಿಳಿಸಿದರು. ಹೋಬಳಿಯ ಹೊನ್ನ ಮಾರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪಾಠಶಾಲೆಯಲ್ಲಿ ಆಯೋಜಿಸಿದ್ದ ನಮ್ಮೂರ ಶಾಲಾ ಹಬ್ಬದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 509
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved