ಪಿಎಚ್‌ಸಿಗಳಿಗೆ ಸರಬರಾಜಾಗುತ್ತಿರುವ ಔಷಧಿ ವಿತರಣೆಯಲ್ಲಿ ಲೋಪತಾಲೂಕಿನಲ್ಲಿ ೧೦ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಇಲ್ಲಿ ವೈದ್ಯರ ಕೊರತೆ ಇದೆ. ತಾಲೂಕು ಆರೋಗ್ಯಾಧಿಕಾರಿ ಅಲ್ಲಿಗೆ ಭೇಟಿ ನೀಡದೇ ಸಮಸ್ಯೆ ಬಗೆಹರಿಸಿಲ್ಲ. ಆಹಾರ ನಡುವೆ ನಿರೀಕ್ಷಕರು ವಸತಿ ನಿಲಯಗಳಿಗೆ ತೆರಳಿ ಆಹಾರದ ಗುಣಮಟ್ಟ, ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ಪರಿಶೀಲನೆ ಮಾಡುತ್ತಿಲ್ಲ. ಮಾಹಿತಿ ಕೇಳಿದರೆ ಸಮರ್ಪಕ ಉತ್ತರ ನೀಡದೆ ಜಾರಿಕೊಳ್ಳುತ್ತಿದ್ದಾರೆ. ತಾಲೂಕಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸರ್ಕಾರದಿಂದ ಬರುವ ಅನುದಾನದ ಮಾಹಿತಿಯನ್ನು ಆರೋಗ್ಯಾಧಿಕಾರಿಗೆ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ತಾಲೂಕು ಕೆಡಿಪಿ ಸದಸ್ಯ ಚೇತನ್.ಸಿ.ಗೌಡ ಆರೋಪಿಸಿದರು.