ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಿಂದ ಹೆಣ್ಣುಮಕ್ಕಳ ಸಂಖ್ಯೆ ಏರಿಕೆಬೇಟಿ ಬಚಾವೊ, ಬೇಟಿ ಪಡಾವೊ ಯೋಜನೆ ಜಾರಿಯಾದ ಬಳಿಕ ಲಿಂಗಾನುಪಾತದಲ್ಲಿ ಏರಿಕೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಕುಮಾರ್ ತಿಳಿಸಿದರು. ಬೇಟಿ ಬಚಾವೊ, ಬೇಟಿ ಪಡಾವೊ ಯೋಜನೆ 10 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಾಲ್ಯವಿವಾಹ ನಿಷೇಧಕಾಯ್ದೆ ಮತ್ತು ಪೋಕ್ಸೊ ಕಾಯ್ದೆಗಳ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಾಗ ಪೋಕ್ಸೋ ಕಾಯ್ದೆ ಮೂಲಕ ಕಠಿಣ ಶಿಕ್ಷೆ ವಿಧಿಸಲು ಕಾನೂನು ರೂಪಿಸಲಾಗಿದೆ ಎಂದು ತಿಳಿಸಿ ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ವಿವರಿಸಿದರು.