ಸಾಲ ವಸೂಲಾತಿಗೆ ಸರ್ಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕುಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ ೨೦೨೫ನ್ನು ಫೆಬ್ರವರಿ ೧೨ರಿಂದ ಜಾರಿಗೊಳಿಸಿದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಸಾಲ ನೀಡುವ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ಸಾಲ ವಸೂಲಾತಿ ಸಂದರ್ಭದಲ್ಲಿ ಅಧ್ಯಾದೇಶದ ಮಾರ್ಗ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸೂಚಿಸಿದ್ದಾರೆ. ಸಾಲಗಾರರು ಪ್ರಾಣ ಕಳೆದುಕೊಳ್ಳುವ ಹಂತಕ್ಕೆ ಹೋಗಲು ಮಾನಸಿಕ ಹಿಂಸೆ ನೀಡಿದ್ದಲ್ಲಿ ಜಾಮೀನು ರಹಿತವಾದ ಪ್ರಕರಣವನ್ನು ದಾಖಲಿಸಲು ಅಧ್ಯಾದೇಶದಲ್ಲಿ ಅವಕಾಶವಿದೆ ಎಂದು ಎಚ್ಚರಿಕೆ ನೀಡಿದರು.