ಈದ್ ಮಿಲಾದ್ ಹಿನ್ನೆಲೆ ಡಿವೈಎಸ್‌ಪಿ ನೇತೃತ್ವದಲ್ಲಿ ಶಾಂತಿ ಸಭೆಪ್ರವಾದಿ ಮಹಮ್ಮದ್ ಪೈಗಂಬರ್ (ಸ)ರವರ ಜನ್ಮದಿನಾಚರಣೆ ಅಂಗವಾಗಿ ಬೇಲೂರಿನಲ್ಲಿ ನಡೆಯುವ ಶೋಭಾಯಾತ್ರೆ ಪೊಲೀಸ್ ಇಲಾಖೆಯ ಮಾರ್ಗದರ್ಶನದಲ್ಲಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಯಶಸ್ವಿಯಾಗಿ ಸಮುದಾಯದ ಮುಖಂಡರು ನಡೆಸಿಕೊಡಬೇಕು ಎಂದು ಡಿವೈಎಸ್ಪಿ ಲೋಕೇಶ್ ಮನವಿ ಮಾಡಿದರು. ಸರ್ಕಲ್ ಇನ್ಸ್ಪೆಕ್ಟರ್ ಜಯಪ್ರಕಾಶ್ ಮಾತನಾಡಿ, ಬೇಲೂರಿನ ಸೌಹಾರ್ದತೆ ನೋಡಿ ತುಂಬಾ ಸಂತೋಷವಾಗಿದೆ. ಇದೇ ರೀತಿ ಮುಂದುವರಿಸೋದು ನಮ್ಮ ಕರ್ತವ್ಯ. ಸಾರ್ವಜನಿಕರು ಮತ್ತು ತಮ್ಮೆಲ್ಲರ ಸಲಹೆ, ಸಹಕಾರದಿಂದ ಉತ್ತಮ ಸಮಾಜ ನಿರ್ಮಾಣ ಮಾಡೋಣ. ಯಾವುದೇ ರೀತಿಯ ದುಷ್ಟಶಕ್ತಿಗಳು ಕಂಡು ಬಂದರೆ ನಮಗೆ ಮಾಹಿತಿ ನೀಡಿ ನಿಮ್ಮ ಹೆಸರು ಗೌಪ್ಯವಾಗಿ ಇಡಲಾಗುವುದು ಎಂದರು.