ಜನಪದ ಸೊಗಡನ್ನು ಉಳಿಸಲು ಯುವಜನಾಂಗ ಮುಂದಾಗಬೇಕುಜನಪದ ಕಲೆಗಳು ಈ ಮಣ್ಣಿನ ಸಂಸ್ಕೃತಿಗಳು, ರಂಗಭೂಮಿ, ಜನಪದ ಗೀತೆಗಳು, ಕಲಾ ನೃತ್ಯಗಳು, ಸೋಬಾನೆ ಪದಗಳು, ಹರಿಕಥೆಗಳು, ಸೇರಿದಂತೆ ಮುಂತಾದ ಕಲೆಗಳನ್ನು ಇಂದಿನ ಯುವಸಮೂಹ ಕಲಿಯುವ ಮೂಲಕ ಜನಪದ ಸೊಗಡನ್ನು ಉಳಿಸುವಲ್ಲಿ ಮುಂದಾಗಬೇಕೆಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಆಧುನೀಕತೆಯ ಭರಾಟೆಯಲ್ಲಿ ಜನಪದ ಸಂಸ್ಕೃತಿ ಅಳಿಯಲು ಅವಕಾಶ ನೀಡಬಾರದು. ಜನಪದ ಸಂಸ್ಕೃತಿ ಅಳಿದರೆ ನಮ್ಮತನವನ್ನು ನಾವು ಕಳೆದುಕೊಂಡಂತೆ, ಜನಪದ ಸೊಗಡಿನಲ್ಲೇ ಭಾರತೀಯ ಮೂಲ, ಪರಂಪರೆಯ ಸತ್ಯ ಅಡಗಿದೆ. ಹಾಗಾಗಿ ಆಧುನಿಕತೆ ಭರಾಟೆಗೆ ಸಿಲುಕಿ ಇಂತಹ ಮಾತೃ ಸಂಸ್ಕೃತಿ ಅಳಿಯಲು ಬಿಡಬಾರದು. ಜನಪದ ಸಂಸ್ಕೃತಿ ಉಳಿಸಿ ಪೋಷಿಸಬೇಕು ಎಂದರು.