ಹನ್ಯಾಳು ಸರ್ಕಾರಿ ಶಾಲೆಯ ವಾರ್ಷಿಕೋತ್ಸವಹನ್ಯಾಳು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆಯಿತು. ಗ್ರಾಮದ ಪೂರ್ವ ಪ್ರಾಥಮಿಕ ಶಾಲೆ(ಮಕ್ಕಳ ಮನೆ), ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು , ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಬಿ.ವಿ.ಮಂಜುನಾಥ್ ಸರ್ ನಿವೃತ್ತ ಶಿಕ್ಷಕರು, ರುದ್ರಪಟ್ಟಣ ಹಾಗೂ ಎಸ್‌ಎಮ್‌ಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಆಗಮಿಸಿ ಶಿಕ್ಷಣದ ಮಹತ್ವ ಹಾಗೂ ಗ್ರಾಮೀಣ ಪ್ರದೇಶದ ಶಾಲೆಗಳ ಅಭಿವೃದ್ಧಿ ಪರ ಮಾತನಾಡಿದರು.