• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಯೋಜನೆ ಸದುಪಯೋಗವಾಗಲಿ
ನರೇಗಾ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಶಾಸಕ ಎಚ್.ಕೆ. ಸುರೇಶ್ ತಿಳಿಸಿದರು. ರಾಷ್ಟ್ರೀಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಿಂದ ದೇಶದ ಜನತೆ ಆರ್ಥಿಕ ಸಬಲತೆ ಹೊಂದಲು ಸಾಧ್ಯವಾಗುತ್ತಿದೆ. ಆದ್ದರಿಂದ ಕಡ್ಡಾಯವಾಗಿ ರೈತರು ನಮ್ಮ ಹಿಂದಿನ ಕಾಲದ ಪದ್ಧತಿಗಳಾದ ಬದು ನಿರ್ಮಾಣ, ಗೋ ಕಟ್ಟೆ ನಿರ್ಮಾಣ, ಕೃಷಿಯಲ್ಲಿ ಮಿಶ್ರಬೆಳೆಗಳಾದ ಜೋಳ, ತೊಗರಿ, ನವಣೆ, ಸಜ್ಜೆ, ಹೆಸರು, ಗುರಾಳುಗಳನ್ನು ಬೆಳೆಯುವ ಮೂಲಕ ಅಭಿವೃದ್ಧಿ ಮತ್ತು ಸ್ವಾವಲಂಬಿಗಳಾಗಬೇಕು ಎಂದರು.
ಪರಿಸರಕ್ಕೆ ಮಲೆನಾಡಿನ ಕಾಫಿ ಬೆಳೆಗಾರರ ಕೊಡುಗೆ ಅಪಾರ
ಭೂಮಿಯಲ್ಲಿ ಉಳುಮೆ ನಡೆಸಿ ಕಾಫಿ ಜೊತೆಯಲ್ಲಿ ಪರಿಸರಕ್ಕೆ ಪೂರಕವಾದ ಗಿಡಮರಗಳನ್ನು ಬೆಳೆಸುವ ಮೂಲಕ ಮಲೆನಾಡು ಕಾಫಿ ಬೆಳೆಗಾರರು ಪರಿಸರಕ್ಕೆ ಅಪಾರ ಪ್ರಮಾಣದ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣ ಹೇಳಿದರು. ಕಾಡಾನೆ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಂದಿನ ದಿನದಲ್ಲಿ ಹೋರಾಟ ನಡೆಸುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಿಂದ ಬೆಳೆಗಾರರು ಸಂಘಟನೆಯಾಗಬೇಕಿದೆ ಎಂದರು.
ಸವಿತಾ ಮಹರ್ಷಿ ಜಯಂತಿಯಂದು ವೃದ್ಧರಿಗೆ ಉಚಿತವಾಗಿ ಕೇಶವಿನ್ಯಾಸ
ಸವಿತಾ ಮಹರ್ಷಿ ಜಯಂತಿಯ ಪ್ರಯುಕ್ತ ಉಚಿತವಾಗಿ ವಯೋವೃದ್ಧರಿಗೆ ಕೇಶವಿನ್ಯಾಸ ಮಾಡಲಾಯಿತು. ಪಟ್ಟಣದ ಮುಖ್ಯ ರಸ್ತೆಯ ಗಾಣಿಗರ ಕಾಂಪ್ಲೆಕ್ಸ್ ಬಾಲಾಜಿ ಹೇರ್‌ ಡ್ರೆಸ್ಸೆಸ್‌ನಲ್ಲಿ ಉಚಿತವಾಗಿ ವೃದ್ಧರಿಗೆ ಹೇರ್‌ ಕಟಿಂಗ್ ಹಾಗೂ ಶೇವಿಂಗ್ ಮಾಡುವುದರ ಮೂಲಕ ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಯಿತು. ಸವಿತಾ ಸಮಾಜದ ಕೆಲವರು ಉನ್ನತ ಶಿಕ್ಷಣ ಪಡೆದು ಉನ್ನತ ಸ್ಥಾನ ಅಲಂಕರಿಸಿರುವರು ಅವರು ತಮ್ಮ ಸಮಾಜದಲ್ಲಿನ ಹಿಂದುಳಿದ ಕುಟುಂಬಗಳ ಶಿಕ್ಷಣಕ್ಕೆ ಸಹಾಯ ಮಾಡುವುದು ಅಗತ್ಯವಾಗಿದೆ ಎಂದರು.
ವೈಜ್ಞಾನಿಕತೆ ಅಳವಡಿಸಿಕೊಂಡರೆ ಕೃಷಿಯಲ್ಲಿ ಲಾಭ ಸಾಧ್ಯ
ರೈತರು ಸಾಂಪ್ರದಾಯಿಕ ಪದ್ಧತಿಗೆ ಅಂಟಿಕೊಳ್ಳದೆ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಜ್ಞಾನಿಕವಾಗಿ ಕೃಷಿ ನಡೆಸಿದಾಗ ಕೃಷಿಯನ್ನು ಲಾಭದಾಯಕ ವಾಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಂ.ಸಿ.ರಂಗಸ್ವಾಮಿ ತಿಳಿಸಿದರು. ರೈತರಿಗೆ ತಜ್ಞರ ಸಲಹೆ, ಮಾರ್ಗದರ್ಶನ ದೊರಕಿಸಲು ಕ್ರಮ ಕೈಗೊಳ್ಳಲಾಗುವುದು. ವಾಟ್ಸ್ಆ್ಯಪ್‌ನಲ್ಲಿ ರೈತರ ಗುಂಪು ರಚಿಸಿ ಪ್ರತಿದಿನ ತಾಲೂಕಿನ ಪ್ರಮುಖ ಬೆಳೆಗಳ ಮಾರುಕಟ್ಟೆ ದರವನ್ನು ತಿಳಿಸುವ ಯೋಜನೆ ರೂಪಿಸುವುದಾಗಿ ಹೇಳಿದರು.
ನಾಳೆ ಗಾಂಧಿ ಭವನದಲ್ಲಿ ಉಚಿತ ಮೆಗಾ ಆರೋಗ್ಯ ಶಿಬಿರ
ಹಾಸನ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪ್ರಪಥಮ ಬಾರಿಗೆ ಫೆಬ್ರವರಿ 8ರಂದು ನಗರದ ಎಂ.ಜಿ ರಸ್ತೆಯ ಗಾಂಧಿ ಭವನ ಹಾಗೂ ಯೂತ್‌ ಹಾಸ್ಟೆಲ್‌ನಲ್ಲಿ ಉಚಿತ ಮೆಗಾ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಅಧ್ಯಕ್ಷ ಕೆ.ಎಚ್. ವೇಣುಕುಮಾರ್ ತಿಳಿಸಿದರು. ಶಿಬಿರದಲ್ಲಿ ಉಚಿತ ವೈದ್ಯಕೀಯ ತಪಾಸಣೆಗಳನ್ನು ನಡೆಸಲಾಗುತ್ತಿದ್ದು ಸುಮಾರು ನೂರಕ್ಕೂ ಹೆಚ್ಚು ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಲಿದ್ದಾರೆ.
ಬೇಲೂರು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಳೇಬೀಡಿನ ರಘುನಾಥ್‌ ಆಯ್ಕೆ
ಬೇಲೂರು ತಾಲೂಕು ಪತ್ರಕರ್ತ ಸಂಘದ ನೂತನ ಅಧ್ಯಕ್ಷರಾಗಿ ರಘುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜ್ ಆಯ್ಕೆಯಾದರು. ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದಲ್ಲಿ ಜಿಲ್ಲಾಧ್ಯಕ್ಷ ವೇಣುಕುಮಾರ್, ರಾಜ್ಯ ಪತ್ರಕರ್ತ ಸಂಘದ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸದಸ್ಯರಾದ ರವಿ ನಾಕಾಲಗೂಡು, ಪ್ರಧಾನ ಕಾರ್ಯದರ್ಶಿ ಶಶಿಧರ್‌, ಉಪಾಧ್ಯಕ್ಷ ಹರೀಶ್ ಅವರ ಸಮ್ಮುಖದಲ್ಲಿ ತಾಲೂಕು ಸಂಘದ ಅಧ್ಯಕ್ಷರಾಗಿ ರಘುನಾಥ್, ಕಾರ್ಯದರ್ಶಿಯಾಗಿ ಶಿವರಾಜ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ಹಳೇಬೀಡಿನ ಕರಿಯಮ್ಮ ದೇವಿಯ ಜೀರ್ಣೋದ್ಧಾರ ಕಾರ್ಯ
ಜೀರ್ಣೋದ್ಧಾರಗೊಂಡು ಇದೀಗ ಉದ್ಘಾಟನೆಯಾಗುತ್ತಿರುವ ಕರಿಯಮ್ಮ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಬೆಳಗ್ಗೆ ೬ ಗಂಟೆಯಿಂದ ಉಷಾಪೂಜೆ, ಮಹಾಗಣಪತಿ ಹೋಮ, ಸ್ಥಾನಶುದ್ದಿ, ಬಿಂಬಶುದ್ಧಿ ಕಲಶಪೂಜೆ, ಶ್ರೀಸೂಕ್ತ ಹೋಮ, ಅನುಜ್ಞಾನಕಲಶ ಪೂಜೆ, ಪ್ರಸಾದ ಹೋಮ, ಆಂಜನೇಯ ಹೋಮ, ರತ್ನಾನ್ಯಾಸ, ಪೀಠಾಧಿಗಳ ಪ್ರತಿಷ್ಠೆ, ಕಾರ್ಯಕ್ರಮದೊಂದಿಗೆ ಅಷ್ಟಬಂಧನ ಪೂಜೆ ದುರ್ಗ ಹೋಮ ನಡೆಸಲಾಯಿತು ಎಂದು ಕೇಶವಭಟ್ಟರು ತಿಳಿಸಿದರು. ನವಗ್ರಹ ಪೂಜೆ, ಅಂಕುರ ಪೂಜೆ, ಶಾಂತಿ ಪ್ರಾಯಶ್ಚಿತ, ಬಿಂಬಶುದ್ಧಿ, ಹೋಮ ಹವನ, ಜೀವಕಲಶ ಸಪ್ತದಿವಾಸಾಂಗ, ಗಂಗೆಪೂಜೆ, ದುರ್ಗಪೂಜೆ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ರವಿ ಕುಟುಂಬಕ್ಕೆ ಯೋಗಾರಮೇಶ್ ಸಾಂತ್ವನ
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಅರಕಲಗೂಡು ತಾಲೂಕಿನ ಕಂಠೇನಹಳ್ಳಿ ಗ್ರಾಮದ ಮೃತ ರೈತ ಕೆ.ಡಿ. ರವಿ ನಿವಾಸಕ್ಕೆ ಪೊಟ್ಯಾಟೋ ಕ್ಲಬ್ ಅಧ್ಯಕ್ಷ ಎಚ್.ಯೋಗಾರಮೇಶ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ನೀಡಿದರು. ಕಾನೂನು ಕಟ್ಟಲೆಗಳಿಂದ ರೈತರ ಬದುಕು ಬದಲಾಗುವುದಿಲ್ಲ. ಬದಲಿಗೆ ಮಾರುಕಟ್ಟೆ ವ್ಯವಸ್ಥೆ ಬೆಂಬಲ ಬೆಲೆ ಗುಣಮಟ್ಟದ ಬೀಜಗಳ ಸರಬರಾಜಿಗೆ ಮುಂದಾಗಬೇಕೆಂದು ಅವರು ಕೇಂದ್ರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಎಸ್ಸೆಸ್ಸೆಲ್ಸಿಯಲ್ಲಿ ಹಾಸನ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಿ
ಪ್ರಸ್ತುತದಲ್ಲಿ ಸ್ಪರ್ಧೆ ಹೆಚ್ಚಾಗಿ ಇರುವುದರಿಂದ ಮಕ್ಕಳಿಗೆ ಒತ್ತಡ ನೀಡದೆ, ಆತ್ಮಸ್ಥೈರ್ಯ ತುಂಬಬೇಕು. ಪ್ರಾಮಾಣಿಕ ಅಧ್ಯಯನದ ಜೊತೆಗೆ ಉತ್ತಮ ಪರಿಶ್ರಮದ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಈ ಬಾರಿ ರಾಜ್ಯದಲ್ಲಿ ಹಾಸನ ಜಿಲ್ಲೆ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಿ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ಹೇಳಿದ್ದಾರೆ. ಮಕ್ಕಳಿಗೆ ಮತ್ತಷ್ಟು ಮಾದರಿ ಪರೀಕ್ಷೆಗಳನ್ನು ಮಾಡಿ, ಗಣಿತ, ವಿಜ್ಞಾನ, ಇಂಗ್ಲೀಷ್‌ ವಿಷಯದಂತಹ ಕಷ್ಟವಾಗಿರುವ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಟ್ಟು, ಪುನರ್ ಮನನ ಮಾಡಿಸಿ ಎಂದು ತಿಳಿಸಿದರು.
ಕೃಷಿ ಕಾಲೇಜು ಬೆಂಗಳೂರು ವಿವಿ ವ್ಯಾಪ್ತಿಯಲ್ಲೇ ಉಳಿಯಲಿ : ಎಚ್. ಡಿ. ರೇವಣ್ಣ ಆಗ್ರಹ

 ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಿಗೆ ತಿಂಗಳಿಗೆ 50 ಸಾವಿರ ಹಾಗೂ ತಾಲೂಕಾಧ್ಯಕ್ಷರಿಗೆ 25 ಸಾವಿರ ನಿಗದಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಗುತ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 553
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved