ಬೇಡಿಕೆ ಈಡೇರಿಕೆಗಾಗಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯತ್‌ಗೆ ಮನವಿ ಸಲ್ಲಿಸಿದರು. ದೇಶದ ಅಭಿವೃದ್ಧಿಗೆ ಪೂರಕವಾದ ಮಕ್ಕಳ ಅಪೌಷ್ಟಿಕತೆಯಿಂದ ಹೋಗಲಾಡಿಸಿ, ಏಕಾಗ್ರತೆಯಿಂದ ಶಿಕ್ಷಣ ಪಡೆಯಲು, ಅರ್ಧದಲ್ಲಿ ಶಾಲೆಯನ್ನು ಬಿಡುವ ಕ್ರಮ ನಿಲ್ಲಿಸಲು ಮಧ್ಯಾಹ್ನದ ಉಪಾಹಾರ ಯೋಜನೆಯನ್ನು ಅಂದಿನಿಂದ ಇಂದಿನವರೆಗೆ ಸಮಗ್ರವಾಗಿ ನಡೆಸಿಕೊಂಡು ಬಂದಿದೆ ಎಂದರು.