ವಿಕಾಸಪರ್ವ ಸಾಮಾಜಿಕ ಜವಾಬ್ದಾರಿ ನೆನಪಿಸುವ ಚಲನಚಿತ್ರ ವಿಕಾಸಪರ್ವ ಒಂದು ಸಾಮಾಜಿಕ ಕಳಕಳಿಯುಳ್ಳ ಚಿತ್ರವಾಗಿದ್ದು, ಈ ಮೂಲಕ ಸಮಾಜಕ್ಕೆ ಅತ್ಯುತ್ತಮ ಸಂದೇಶವನ್ನು ಕಮರ್ಷಿಯಲ್ ಆಗಿ ಹೇಳುವ ಪ್ರಯತ್ನವನ್ನು ಚಿತ್ರತಂಡ ಮಾಡಿದೆ. ವಿಶೃತ್ ನಾಯಕ್ ಅವರು ವಿಕಾಸ ಪರ್ವ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುವ ಜೊತೆಗೆ ಸಿನಿಮಾದ ಕಾರ್ಯಕಾರಿ ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದಾರೆ. ಅರಸ್ ಅವರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ ಎಂದರು. ಮನುಷ್ಯ ಸ್ವಲ್ಪ ವಿವೇಚನೆಯಿಂದ ನಡೆದುಕೊಂಡರೆ ಅದು ವಿಕಾಸಪರ್ವ ಆಗುತ್ತದೆ ಎಂದು ಈ ಚಿತ್ರದಲ್ಲಿ ಹೇಳಲಾಗಿದೆ. ಮಧ್ಯಮ, ವಯಸ್ಕರ ಸುತ್ತ ನಡೆಯುವ ಸಾಂಸಾರಿಕ ಕಥೆಯ ಜೊತೆಗೊಂದು ಮೆಸೇಜ್ ಈ ಚಿತ್ರದಲ್ಲಿದೆ. ಚಿತ್ರದ ಟೀಸರ್, ಟ್ರೇಲರ್, ಹಾಡುಗಳು ಈಗಾಗಲೇ ಕೇಳುಗರ, ನೋಡುಗರ ಮನ ಗೆದ್ದಿದ್ದು, ಚಿತ್ರದಲ್ಲಿ ಏನೋ ವಿಶೇಷವಿದೆ ಎಂಬ ಕಾತುರ ಹುಟ್ಟಿಸಿವೆ.