ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಳಂಬ ಖಂಡಿಸಿ ಪ್ರತಿಭಟನೆರಾಜ್ಯದ ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ೪೩೨ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು ೬,೦೦೦ ಕಾಯಂ ಉಪನ್ಯಾಸಕರಲ್ಲಿ ೩,೦೦೦ಕ್ಕಿಂತ ಹೆಚ್ಚು ಮಂದಿ ಈಗಾಗಲೇ ನಿವೃತ್ತರಾಗಿದ್ದಾರೆ. ಇನ್ನುಳಿದ ೩,೦೦೦ ಕಾಯಂ ಉಪನ್ಯಾಸಕರ ಜೊತೆ ಸುಮಾರು ೧೨,೦೦೦ ಅತಿಥಿ ಉಪನ್ಯಾಸಕರ ನೆರವಿನಿಂದ ತರಗತಿಗಳು ಸಾಗುತ್ತಿವೆ. ಗುಣಮಟ್ಟದ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಹಕ್ಕು, ಅದನ್ನು ಖಾತ್ರಿಪಡಿಸುವುದು ಸರ್ಕಾರದ ಕರ್ತವ್ಯ. ಆದರೆ ಸರ್ಕಾರ ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತು, ನ್ಯಾಯಾಲಯದ ಆದೇಶವನ್ನೂ ಕಡೆಗಣಿಸಿ, ನೇಮಕಾತಿಯಲ್ಲಿ ಗಂಭೀರ ವಿಳಂಬ ತರುತ್ತಿರುವುದು ನಿಜಕ್ಕೂ ಕಳವಳಕರ ಎಂದರು.