• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಟೋ ಚಾಲಕರ ವಿರುದ್ಧ ಸಿಎಂಗೆ ಪತ್ರ ತನಿಖೆಗೆ ಒತ್ತಾಯ
ವಿದ್ಯಾರ್ಥಿನಿ ಮೇಲೆ ಲೈಗಿಂಕ ದೌರ್ಜನ್ಯ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗೆ ಬರೆದಿರುವ ಪತ್ರ ದುರದ್ದೇಶದಿಂದ ಕೂಡಿದ್ದು ಸಮಗ್ರ ತನಿಖೆ ನೆಡೆಸಬೇಕು ಎಂದು ಆಟೋ ಚಾಲಕರ ಸಂಘದಿಂದ ಶನಿವಾರ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು. ಹೊಸ ಬಸ್ ನಿಲ್ದಾಣದ ಎದುರು ನಿಲುಗಡೆ ಮಾಡಲಾಗುವ ಆಟೋ ಚಾಲಕರು ಹಾಗೂ ಕಾರು ಚಾಲಕರು ವಿದ್ಯಾರ್ಥಿನಿಯೊಬ್ಬರನ್ನು ಮಾನಸಿಕವಾಗಿ ಘಾಸಿಗೊಳಿಸಿ ಮೈಮುಟ್ಟಿ ಎಳೆದಾಡುವ ಮೂಲಕ ಹಿಂಸೆ ನೀಡಿದ್ದಾರೆ. ಆದ್ದರಿಂದ ಇಲ್ಲಿರುವ ಆಟೋ ಹಾಗೂ ಕಾರು ನಿಲ್ದಾಣವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿನಿ ಹೆಸರಿನಲ್ಲಿ ಅನಾಮಧೇಯವಾಗಿ ಬರೆದಿರುವ ಪತ್ರ ರಾರಾಜಿಸುತ್ತಿದೆ.
ಕನ್ನಡ ಭಾಷೆಯನ್ನು ಬೆಳೆಸಬೇಕು ಎಂದ ಶಿವರಾಮು
ಕನ್ನಡ ಭಾಷೆ ಅಕ್ಷರ ಮಾತ್ರವಲ್ಲ, ಕನ್ನಡಿಗರ ನರನಾಡಿಗಳಲ್ಲಿ ಇರುವ ಭಾಷೆ ಕನ್ನಡ ಎಂದು ನಾಗಶ್ರೀ ಆಂಗ್ಲ ಮಾಧ್ಯಮ ಶಾಲೆಯ ಬಿ.ಎಸ್ ಶಿವರಾಮು ಹೇಳಿದರು. ಟೈಮ್ಸ್‌ ಪಿಯು ಕಾಲೇಜು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ಸಂಪ್ರದಾಯಕ ದಿನ, ಪ್ರಯೋಗ ಶಾಲೆ ಹಾಗೂ, ಸವಿರುಚಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಕನ್ನಡಕ್ಕೆ ಸಂದಿವೆ. ಕನ್ನಡ ಭಾಷೆಯನ್ನು ಬೆಳೆಸಬೇಕು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಗೆ ಸಿದ್ಧರಾಗಬೇಕು. ಪದವಿಪೂರ್ವ ಕಾಲೇಜು ಹಂತ ವಿದ್ಯಾರ್ಥಿಗಳ ಪಾಲಿಗೆ ಪ್ರಮುಖ ಘಟ್ಟವಾಗಿದೆ ಎಂದರು.
ಶಾಂತಿಯುತವಾಗಿ ನಡೆದ ಗಣೇಶೋತ್ಸವದ ಮೆರವಣಿಗೆ
ಗಣೇಶೋತ್ಸವದ ಮೆರವಣಿಗೆ ೨ನೇ ದಿನವಾದ ಶನಿವಾರವೂ ಶಾಂತಿಯುತವಾಗಿ, ಸಡಗರ, ಸಂಭ್ರಮದಿಂದ ಮುಂದುವರಿದಿದ್ದು, ೨೫ಸಾವಿರಕ್ಕೂ ಹೆಚ್ಚು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ೨೫ಕ್ಕೂ ಹೆಚ್ಚಿನ ಸಾಂಸ್ಕೃತಿಕ ಕಲಾ ತಂಡಗಳು ಜನಮನಸೂರೆಗೊಂಡರೆ, ಭಾರಿ ಮದ್ದು ಗುಂಡುಗಳ ಪ್ರದರ್ಶನ ನೆರೆದಿದ್ದ ಜನರನ್ನು ನಿಬ್ಬೆರಗಾಗಿಸುವಂತೆ ಮಾಡಿದೆ. ಹಿಂದೂ-ಮುಸಲ್ಮಾನ್‌ ಲೋಡರ್ಸ್‌ ಮಜ್ದೂರ್ ಯೂನಿಯನ್ ವತಿಯಿಂದ ಗಣಪತಿಗೆ ಭಾರಿ ಗಾತ್ರದ ಹಾರ ಸಮರ್ಪಿಸಿದರು. ಅಲ್ಲದೇ ಅಂಗಡಿಯ ಪ್ರತಿಯೊಬ್ಬ ವರ್ತಕರೂ ವಿಶೇಷ ಪೂಜೆ ಸಲ್ಲಿಸಿದರು.
ಶಾಸಕ ಅಥವಾ ಸಂಸದನಾಗಬೇಕೆಂದು ನಾನೆಂದೂ ಹಪಹಪಿಸಿಲ್ಲ
ನಾನು ಸಂಸದ, ಶಾಸಕನಾಗಲು ಎಂದು ಕೂಡ ಹಪಹಪಿಸಿಲ್ಲ. ಹಾಗಿದ್ದರೆ ನಾನು ಚಿತ್ರರಂಗಕ್ಕೆ ಹೋಗುತ್ತಿರಲಿಲ್ಲ, ರಾಜಕಾರಣಕ್ಕೆ ಬರುತ್ತಿದ್ದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಹಲವಾರು ಸಂದರ್ಭದಲ್ಲಿ ಅಖಾಡ ಸಿದ್ಧವಾಗಿತ್ತು, ಬಹಳ ಸುಲಭವಾಗಿ ಶಾಸಕನಾಗಬಹುದಿತ್ತು. ಆದರೆ ಇಲ್ಲಿಯವರೆಗೂ ನಾನು ನಮ್ಮ ಪಕ್ಷ ಸಂಕಷ್ಟದಲ್ಲಿತ್ತು, ಆ ಸಂದರ್ಭದಲ್ಲಿ ಒಬ್ಬ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ ಎಂದು ಹೇಳಿದರು.
ನಿವೃತ್ತ ಶಿಕ್ಷಣಾಧಿಕಾರಿ ತಮಣ್ಣಗೌಡರಿಗೆ ಸನ್ಮಾನ
ಜಿಲ್ಲಾ ವಸತಿ ಶಾಲೆಗಳ ಒಕ್ಕೂಟದಿಂದ ತಾಲೂಕಿನ ದೊಡ್ಡಮಗ್ಗೆ ಡಾ.ಬಿ.ಆರ್‌.ಅಂಬೇಡ್ಕರ್‌ ವಸತಿ ಶಾಲೆಯಲ್ಲಿ ಶುಕ್ರವಾರ ಹಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಜೆ.ಬಿ.ತಮಣ್ಣಗೌಡ ಅವರನ್ನು ಸನ್ಮಾನಿಸಲಾಯಿತು. ತಮಣ್ಣಗೌಡ ಅವರು ಶಿಕ್ಷಣ ಕ್ಷೇತ್ರದಲ್ಲಿ ಗುರುತರ ಸೇವೆ ಸಲ್ಲಿಸಿದ್ದು, ಮಕ್ಕಳಿಗಾಗಿ ತಮ ಜೀವನವನ್ನೇ ಸಮರ್ಪಣೆ ಮಾಡಿದ್ದಾರೆ. ಕಂದಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ೨೦ ವರ್ಷ ಪ್ರಾಂಶುಪಾಲರಾಗಿದ್ದ ಅವರು ತಮಗೆ ಬರುತ್ತಿದ್ದ ಸಂಬಳದ ಬಹುಪಾಲನ್ನು ವಿದ್ಯಾರ್ಥಿಗಳಿಗೆ ಮೀಸಲಿಟ್ಟಿದ್ದರು.
ಕುಂದೂರು ಗ್ರಾಪಂ ಅಧ್ಯಕ್ಷರಾಗಿ ಮಧು ಆಯ್ಕೆ
ದಂಡಿಗನಹಳ್ಳಿ ಹೋಬಳಿ ಕುಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾದ ಕರಡೇವು ಡಿ. ಎಲ್. ಮಧುರವರು ಚುನಾಯಿತರಾದರು. ಉಪಾಧ್ಯಕ್ಷರಾಗಿ ಜಕ್ಕೇನಹಳ್ಳಿ ಗ್ರಾಮದ ನಂಜಮ್ಮನವರು ಆಯ್ಕೆಯಾದರು. ಚುನಾವಣೆಯಲ್ಲಿ ಎಂಟು ಮತಗಳನ್ನು ಪಡೆದು ಡಿ ಎಲ್ ಮಧು ಅಧ್ಯಕ್ಷರಾಗಿ ಮತ್ತು ೯ ಮತಗಳನ್ನು ಪಡೆದ ನಂಜಮ್ಮನವರು ಉಪಾಧ್ಯಕ್ಷರಾಗಿ ಚುನಾವಣೆಯಲ್ಲಿ ಜಯ ಸಾಧಿಸಿದರು. ಚುನಾವಣಾಧಿಕಾರಿಗಳಾಗಿ ತಾಲೂಕು ಪಂಚಾಯಿತಿ ನಿರ್ವಹಣಾಧಿಕಾರಿಯಾದ ಜಿ ಆರ್ ಹರೀಶ್ ಕಾರ್ಯನಿರ್ವಹಿಸಿದ್ದರು.
ನಡಾವಳಿಯಲ್ಲಿ ದಾಖಲಾಗದ ಸಭೆಯ ಚರ್ಚೆಗಳು
ನನೆಗುದಿಗೆ ಬಿದ್ದಿರುವ ಒಳಚರಂಡಿ ವ್ಯವಸ್ಥೆ ಬಗ್ಗೆ ಸರ್ಕಾರದ ಗಮನ ಸೆಳೆಯುವ ಬಗ್ಗೆ ಹಿಂದಿನ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದ್ದರೂ ಸಭಾ ನಡಾವಳಿ ಪುಸ್ತಕದಲ್ಲಿ ದಾಖಲಿಸದಿರುವ ಬಗ್ಗೆ ಶುಕ್ರವಾರ ನಡೆದ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಯಿತು. ಪಪಂ 122 ವಾಣಿಜ್ಯ ಮಳಿಗೆ ಹರಾಜಿನಲ್ಲಿ ಗೋಲ್‌ಮಾಲ್ ನಡೆದಿದೆ. ಕೆಲ ಮಳಿಗೆಗಳು ರು. 50 ಸಾವಿರದಿಂದ ರೂ 74 ಸಾವಿರ ಬಾಡಿಗೆಗೆ ಹರಾಜಾಗಿದ್ದರೆ ಇನ್ನು ಕೆಲವು ಮಳಿಗೆಗಳು ಕೇವಲ ರು. 2 ಸಾವಿರದೊಳಗೆ ಬಾಡಿಗೆ ಹರಾಜು ನಿಂತಿದೆ. 18 ಮಳಿಗೆಗಳಿಗೆ ಯಾರೂ ಬಿಡ್ ಮಾಡಿಲ್ಲ. ಇದು ಅನುಮಾನಕ್ಕೆ ಕಾರಣವಾಗಿದೆ ಎಂದರು.
ಸಂಬಲ್ ಗೋಲಿಬಾರ್ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ
ಉತ್ತರ ಪ್ರದೇಶದ ಸಂಬಲ್‌ನಲ್ಲಿ ನಡೆದ ಗೋಲಿಬಾರ್‌ನಲ್ಲಿ ಐದು ಜನರ ಹತ್ಯೆ ನಡೆಸಿದ ಘಟನೆಯನ್ನು ವಿರೋಧಿಸಿ ಹಾಗೂ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐನಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಗೋಲಿಬಾರ್‌ಲ್ಲಿ ಪ್ರಾಣ ತೆತ್ತವರ ಕುಟುಂಬಗಳಿಗೆ ಪರಿಹಾರವನ್ನು ಕೊಡಬೇಕು. ಮಸೀದಿ ಸರ್ವೆ ಕಾರ್ಯವನ್ನು ಕೂಡಲೇ ನಿಲ್ಲಿಸಲು ಆದೇಶ ನೀಡಬೇಕೆಂದು ಆಗ್ರಹಿಸಿದರು.
ಹಿಮ್ಸ್ ಆವರಣದಲ್ಲಿ ರಾಜ್ಯಮಟ್ಟದ ಕಾನೂನು ಅರಿವು
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್) ಆವರಣದಲ್ಲಿ ಇಂದು (ನ.೩೦) ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ರಾಜ್ಯಮಟ್ಟದ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅಕ್ಷಯ್ ಡಿ.ಎಂ. ಗೌಡ ತಿಳಿಸಿದರು. ಎಲ್ಲಾ ಇಲಾಖೆಗಳಲ್ಲಿಯೂ ಹೊರಗುತ್ತಿಗೆ ನೌಕರರೆಂದರೆ ನಿರ್ಲಕ್ಷ್ಯತೋರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ನೀಡದೆ ಇರುವುದು ವಿಪರ್ಯಾಸ. ಹೀಗಾಗಿ ಸಂಘಟನೆ ಮೂಲಕ ನಮ್ಮ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಡಲು ಮುಂದಾಗಿದ್ದೇವೆ ಎಂದರು.
ಮತ್ತಿನಲ್ಲಿ ಚರಂಡಿಗೆ ಬಿದ್ದು ವ್ಯಸನಿ ಸಾವು
ಮದ್ಯವ್ಯಸನಿಯೊಬ್ಬ ಕಂಠಪೂರ್ತಿ ಕುಡಿದು ಕೊಳಚೆ ನೀರು ತುಂಬಿದ್ದ ಚರಂಡಿಗೆ ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿಕ್ಕೋಡಿನಲ್ಲಿ ಶುಕ್ರವಾರ ಬೆಳಕಿಗೆ ಬಂದಿದೆ. ಗುರುವಾರ ಕೆಲಸದ ನಿಮಿತ್ತ ಹೊರಹೋಗಿದ್ದ ಓಂಕಾರ್ ಮನೆಗೆ ಬರುವ ಸಂದರ್ಭದಲ್ಲಿ ಕಂಠಪೂರ್ತಿ ಮದ್ಯ ಸೇವಿಸಿ ಕೊಳಚೆ ನೀರು ತುಂಬಿದ್ದ ಚರಂಡಿಗೆ ಆಯತಪ್ಪಿ ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ ಸ್ಥಳೀಯರು ಚರಂಡಿಗೆ ಬಿದ್ದಿರುವುದನ್ನು ಕಂಡು ಮೇಲೆತ್ತುವ ಸಂದರ್ಭದಲ್ಲಿ ಓಂಕಾರ ಸಾವನ್ನಪ್ಪಿರುವುದು ದೃಢಪಟ್ಟಿದೆ.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 510
  • next >
Top Stories
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved