• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಆಯೋಗದಂತೆ ಪುರುಷ ಆಯೋಗ ರಚನೆಯಾಗಲಿ
ಮಹಿಳೆಯರ ಸಮಸ್ಯೆ ಹೇಳಿಕೊಳ್ಳಲು ಮಹಿಳಾ ಆಯೋಗ, ಮಕ್ಕಳ ಸಮಸ್ಯೆ ಹೇಳಲು ಮಕ್ಕಳ ಆಯೋಗ ಇರುವಂತೆ ಪುರುಷರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಸಂವಿಧಾನಾತ್ಮಕವಾಗಿ ಪುರುಷ ಆಯೋಗ ರಚನೆ ಆಗಲೇಬೇಕೆಂದು ಓಡನಹಳ್ಳಿ ನ್ಯಾನೋ ಫುಡ್ ಪಾರ್ಕ್ ಸಿಇಒ ಅಶೋಕ್ ಒತ್ತಾಯಿಸಿದರು. ಹುಡುಗ ಮೋಸ ಮಾಡಿದರೆ ಯುವತಿ ಮಹಿಳಾ ಆಯೋ ಅಥವಾ ಪೊಲೀಸ್‌ ಠಾಣೆ ಮೆಟ್ಟಿಲೇರುತ್ತಾಳೆ. ಆದರೆ, ಮೋಸಕ್ಕೊಳಗಾದ ಯುವಕರ ಗೋಳನ್ನು ಕೇಳುವವರೇ ಇಲ್ಲ ಎಂದರು.
ಕೆಂಚಾಂಬ ದೇವಸ್ಥಾನದ ಕಲ್ಯಾಣಿ ಸ್ವಚ್ಛಗೊಳಿಸಲು ಶಾಸಕ ಮಂಜು ಸಂಕಲ್ಪ
ಬಿಜೆಪಿ ಕಾರ್ಯಕರ್ತರೆಲ್ಲರೂ ಒಂದು ದಿನ ಶ್ರೀ ಕೆಂಚಾಂಬದೇವಿ ಕಲ್ಯಾಣಿಯನ್ನು ಸ್ವಚ್ಛಗೊಳಿಸಲು ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದ್ದಾರೆ ಎಂದು ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್. ಡಿ. ಗೋಪಾಲ್ ತಿಳಿಸಿದರು. ಶಾಸಕರು ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಲ್ಯಾಣಿಯಲ್ಲಿ ಕೊಳಕು ನಿರ್ಮಾಣವಾಗಿರುವುದನ್ನು ಗಮನಿಸಿ, ಪಕ್ಷದ ಎಲ್ಲ ಕಾರ್ಯಕರ್ತರು ಒಂದು ದಿನ ಕಲ್ಯಾಣಿಯನ್ನು ಶುಚಿಗೊಳಿಸೋಣ ಎಂದು ಕರೆ ನೀಡಿದರು.
ನಬಾರ್ಡ್ ರೈತರಿಗೆ ಸಾಲ ವಿತರಿಸಲು ಮುಂದಾಗಬೇಕು
ಗ್ರಾಮೀಣ ಪ್ರದೇಶಗಳಲ್ಲಿ ರೈತರುಗಳಿಗೆ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖಾಂತರ ಬೆಳೆ ಸಾಲ, ಅಭಿವೃದ್ಧಿ ಸಾಲಗಳನ್ನು ವಿತರಿಸಿ ಅನುಕೂಲ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಕೇಂದ್ರ ಸರ್ಕಾರದ ಅಸಹಕಾರ ನೀತಿಯಿಂದ ನಬಾರ್ಡ್ ವತಿಯಿಂದ ಸಾಲ ಸೌಲಭ್ಯ ದೊರೆಯದೆ ರೈತರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರ ಈ ಧೋರಣೆ ಕೈ ಬಿಟ್ಟು ರೈತರಿಗೆ ಸಾಲ ವಿತರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಸಂವಿಧಾನ ದೇಶದ ಪ್ರತೀ ಪ್ರಜೆಗೂ ಸರ್ವ ಸಮಾನತೆ ಕಲ್ಪಿಸಿದೆ
ಅರಸೀಕೆರೆ ನಗರದ ಹೊರವಲಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ಭಾರತ ಸಂವಿಧಾನವು ದೇಶದ ಸಾರ್ವಭೌಮತೆಯನ್ನು ಎತ್ತಿ ಹಿಡಿಯುವುದರ ಜೊತೆಗೆ ಭಾರತದ ಪ್ರತಿಯೊಬ್ಬ ಪ್ರಜೆಗೂ ಸರ್ವ ಸಮಾನತೆಯನ್ನು ಕಲ್ಪಿಸಿಕೊಟ್ಟಿದೆ. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.
ವಕ್ಫ್ ತಿದ್ದುಪಡಿಯಾದರೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತೆ ವಹಿಸಿ
ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಏನಾದರೂ ಸ್ವೀಕಾರಗೊಂಡರೆ ಮುಂದೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಬಹುದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತೆ ವಹಿಸುವಂತೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಸಲ್ಲಿಸಿದರು. ತಾವು ಜಿಲ್ಲೆಯಾದ್ಯಂತ ತಕ್ಷಣ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಿ ಪ್ರಚೋದನೆ ನೀಡುವವರನ್ನು, ಸಮಾಜ ಘಾತುಕರನ್ನು ಬಂಧಿಸಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲು ಮನವಿ ಸಲ್ಲಿಸಿದರು.
ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ದರ ಪಡೆಯದಂತೆ ನಿಗಾ ವಹಿಸಿ
ಕೃಷಿ ಯಂತ್ರೋಪಕರಣಗಳನ್ನು ನಿಗದಿತ ದರದಲ್ಲಿ ಕೃಷಿ ಚಟುವಟಿಕೆಗಳಿಗೆ ನೀಡಬೇಕು. ಏಜೆಸ್ಸಿಗಳು ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯದಂತೆ ನಿಗಾ ವಹಿಸುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸೂಚನೆ ನೀಡಿದರು. ಪರಿಶಿಷ್ಟ ಪಂಗಡಗಳ ಜನರಿಲ್ಲ ಎಂದು ಇತರೆ ಸಮುದಾಯಕ್ಕೆ ವೆಚ್ಚ ಮಾಡಲು ಅವಕಾಶ ಇರುವುದಿಲ್ಲ. ಆದ್ದರಿಂದ ಹಣ ವರ್ಗಾವಣೆಯಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಅರೇಹಳ್ಳಿ ಕಾಫಿ ಕೋಅಪರೇಟಿವ್ ಸೊಸೈಟಿಗೆ ಪದಾಧಿಕಾರಿಗಳ ಚುನಾವಣೆ
ಮೈಸೂರು ಪ್ರಾಂತೀಯ ಸಹಕಾರ ಸಂಘಗಳ ಜಂಟಿ ನಿಬಂಧಕರ ಆದೇಶದ ಮೇರೆಗೆ ಚುನಾವಣಾ ಅಧಿಕಾರಿಯಾಗಿ ಗುರುಮೂರ್ತಿರವರು ಸಹಕಾರ ಸಂಘಗಳ ಕಾಯ್ದೆ ನಿಯಮಗಳ ಪ್ರಕಾರ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದರು. ತೆರವಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಯು.ಪಿ ಮಲ್ಲೇಶ್ ಅಧ್ಯಕ್ಷರಾಗಿ ಹಾಗು ಎಂ.ಆರ್ ವಿನೋದ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಘೋಷಿಸಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪ್ರಗತಿ ಪರಿಶೀಲನಾ ಸಭೆ
ಸೆಸ್ಕಾಂ ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ ರಾಘವೇಂದ್ರ ಗೃಹ ಜ್ಯೋತಿಯಡಿ ತಾಲೂಕಿನಲ್ಲಿ ಒಟ್ಟು 23,296 ನೋಂದಾವಣೆಗೊಂಡಿದ್ದಾರೆ. 23,217 ಗ್ರಾಹಕರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. 21 ಗ್ರಾಹಕರು ತಾಂತ್ರಿಕ ಕಾರಣದಿಂದ ಯೋಜನೆಯ ಹೊರಗುಳಿದಿದ್ದಾರೆ. ತಾಂತ್ರಿಕ ಕಾರಣದಿಂದ ಹೊರಗಿರುವ ಗ್ರಾಹಕರಿಗೆ ಶೀಘ್ರ ಸಮಸ್ಯೆ ಬಗೆಹರಿಸಿ ಯೋಜನೆಯ ಲಾಭ ಮಾಡಿಕೊಡಲಾಗುವುದೆಂದು ಸಭೆಗೆ ಮಾಹಿತಿ ನೀಡಿದರು.
ಹಳ್ಳಿಹಳ್ಳಿಗಳಿಗೂ ಕನ್ನಡ ಸಾಹಿತ್ಯದ ಸೊಬಗು ಹರಡಲಿ: ಕಸಾಪ ಅಧ್ಯಕ್ಷ ಮಾನ ಮಂಜೇಗೌಡ
ಸಾಹಿತ್ಯ ಪರಿಷತ್ ಮೊದಲ ಬಾರಿಗೆ ಹಳ್ಳಿಯ ಕಡೆ ಬಂದು ಕನ್ನಡ ಕಾರ್ಯಕ್ರಮ ಮಾಡುವುದು ತುಂಬಾ ಖುಷಿಯಾಗಿದೆ. ಹಲ್ಮಿಡಿ ಶಾಸನದ ಬಗ್ಗೆ ನಮಗೆ ಸರಿಯಾದ ಮಾಹಿತಿ ತಿಳಿದುಕೊಳ್ಳಲು ಈ ಕಾರ್ಯಕ್ರಮ ಉತ್ತಮವಾಗಿದೆ.
ಪ್ರತಿಯೊಬ್ಬ ವ್ಯಕ್ತಿಯ ಬದುಕು ಕಟ್ಟಿರುವ ಶ್ರೇಷ್ಠ ಗ್ರಂಥ ಸಂವಿಧಾನ: ಹಿರಿಯ ನ್ಯಾ. ನಿವೇದಿತಾ
ಯಾವುದೇ ಹಕ್ಕುಗಳು ಇಲ್ಲದೇ, ಜೀತಕ್ಕೆ ಒಳಗಾಗಿ, ಶೋಷಣೆಯನ್ನು ಅನುಭವಿಸುತ್ತಾ ಸಾಮಾನ್ಯರಂತೆ ಹಿಂದಿನ ಜನರು ಬದುಕು ಕಟ್ಟಿಕೊಂಡಿದ್ದರು, ಆದರೆ ಈಗ ಸುಖ, ಶಾಂತಿ, ನೆಮ್ಮದಿ ಹಾಗೂ ಭಯ, ಭೀತಿಯಿಲ್ಲದೇ ನಾವು ಸಂವಿಧಾನ ನೀಡಿದ ಸೌಲಭ್ಯಗಳಿಂದ ಬದುಕು ರೂಪಿಸಿಕೊಂಡಿದ್ದೇವೆ ಎಂಬುದನ್ನು ಅರಿತಾಗ ಸಂವಿಧಾನದ ಮಹತ್ವ ತಿಳಿಯಬಹುದಾಗಿದೆ.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 510
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved