• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವೋದಯ ವಿದ್ಯಾಸಂಘಕ್ಕೆ ಐವತ್ತು ಸಾವಿರ ರುಪಾಯಿ ಕೊಡುಗೆ
ನವೋದಯ ವಿದ್ಯಾಸಂಘದ ನೂತನ ನಿರ್ದೇಶಕರಾದ ವಕೀಲರಾದ ಜಲೇಂದ್ರ ಕುಮಾರ್‌ ಸಂಘಕ್ಕೆ ವೈಯಕ್ತಿಕವಾಗಿ ತಮ್ಮ ತಂದೆ ತಾಯಿಯ ಹೆಸರಿನಲ್ಲಿ ೫೦ ಸಾವಿರ ರು. ಗಳ ಹಣ ನೀಡಿದರು. ಶಾಲೆಯ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳನ್ನು ಹೆಚ್ಚು ಮಾಡುವ ಸಲುವಾಗಿ ನಿರ್ದೇಶಕರಾಗಿ ಶಾಲೆಗೆ ಬಂದಿದ್ದು, ಈ ಹಣವನ್ನು ಶಾಲೆಯ ಅಭಿವೃದ್ಧಿಗೆ ಖರ್ಚು ಮಾಡಿ ಶಾಲೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸಿ ಜನರಿಗೆ ಉತ್ತಮ ಸಂದೇಶವನ್ನು ನೀಡಲು ಬಯಸಿದ್ದೇನೆ ಎಂದು ತಿಳಿಸಿದರು.
ಕ್ರೀಡೆಯು ಮಕ್ಕಳ ಭವಿಷ್ಯವನ್ನು ರೂಪಿಸುತ್ತದೆ
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ದಿವ್ಯ ವಿದ್ಯಾಸಂಸ್ಥೆ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಜೂನಿಯರ್ ಕಾಲೇಜಿನ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ಬೇಲೂರು ಕಸಬಾ ಬಿ. ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಶಿವಮರಿಯಪ್ಪ ಮಾತನಾಡಿದರು. ಕ್ರೀಡೆಗಳು ಸಹ ಮಕ್ಕಳ ಭವಿಷ್ಯವನ್ನು ರೂಪಿಸುತ್ತವೆ ಎಂದು ಹೇಳಿದರು.
ಬಿಜೆಪಿ ಪಾದಯಾತ್ರೆಗೆ ಹಾಸನದಿಂದ ಕಾರ್ಯಕರ್ತರು
ರಾಜ್ಯ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನಿಂದ ಮೈಸೂರು ಚಲೋ ಹೋರಾಟಕ್ಕೆ ಬೆಂಬಲ ಸೂಚಿಸಲು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡರ ನೇತೃತ್ವದಲ್ಲಿ ಹಾಸನ ಜಿಲ್ಲೆಯಿಂದ ೧೦ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬುಧವಾರ ನಗರದಿಂದ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು.
ಪರಿಸರ ಸಂರಕ್ಷಣೆ ಕುರಿತು ಜಾಗೃತಿ
ರಾಮನಾಥಪುರದ ದೊಡ್ಡಮಗ್ಗೆ ಹೋಬಳಿಯ ಸಂತೆಮರೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವಿವಿಧ ರೀತಿಯ ಹಣ್ಣು, ಹಂಪಲು ಗಿಡ ನೆಡುವ ಕಾರ್ಯಕ್ರಮವನ್ನು ಸ್ವಸ್ಥ ಸಮಾಜ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ರಾಮಸ್ವಾಮಿ ನೆರವೇರಿಸಿದರು. ಶಾಲಾ ವಿದ್ಯಾರ್ಥಿಗಳಲ್ಲಿ ಪರಿಸರದ ಅರಿವು ಮೂಡಿಸಿ ಮತ್ತು ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿಸಬೇಕು ಎಂದು ಸಲಹೆ ನೀಡಿದರು.
ಭೂ ಕುಸಿತಕ್ಕೆ ಹೋಮ್ ಸ್ಟೇಗಳೇ ಕಾರಣ ಎನ್ನುವಂತೆ ಸರ್ಕಾರ ಬಿಂಬಿಸುತ್ತಿದೆ
ಸಕಲೇಶಪುರ ತಾಲೂಕಿನ ಕೆಲವು ಭಾಗಗಳಲ್ಲಿ ಭೂ ಕುಸಿತ ಉಂಟಾಗಿರುವುದಕ್ಕೆ ರೆಸಾರ್ಟ್ ಹಾಗೂ ಹೋಂ ಸ್ಟೇಗಳೇ ಕಾರಣ ಎಂದು ರಾಜ್ಯ ಸರ್ಕಾರವೇ ಬಿಂಬಿಸುತ್ತಿರುವುದು ಸರಿಯಲ್ಲ ಎಂದು ಸಕಲೇಶಪುರ ರೆಸಾರ್ಟ್ ಮಾಲೀಕರ ಸಂಘದ ಅಧ್ಯಕ್ಷ ಮಸ್ತಾರೆ ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿ ೭೫ ರಸ್ತೆ ಅಗಲೀಕರಣ, ಪಶ್ಚಿಮಘಟ್ಟದಲ್ಲಿ ಎತ್ತಿನಹೊಳೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಮಾಡಿರುವುದು ಹಾಗೂ ಪವರ್ ಪ್ರಾಜೆಕ್ಟ್‌ನಂತಹ ಇತರೆ ದೊಡ್ಡ ದೊಡ್ಡ ಯೋಜನೆಗಳನ್ನು ಮಾಡಿರುವುದರಿಂದ ತಾಲೂಕಿನಲ್ಲಿ ಭೂಕುಸಿತವಾಗಲು ಪ್ರಮುಖ ಕಾರಣವಾಗಿದೆ ಎಂದರು.
ಕಾರಲ್ಲಿ ಜಾಲಿರೈಡ್‌ ಹೊರಟ ಅಪ್ರಾಪ್ತರಿಂದ ಅಪಘಾತ
ನೂರಾರು ವಾಹನಗಳು ಸಂಚಾರ ಮಾಡುವ ಹೈಸ್ಕೂಲ್ ಫೀಲ್ಡ್ ರಸ್ತೆಯನ್ನು ದಾಟಿ ಹೋಟೆಲ್‌ನ ಪೋರ್ಟಿಕೊದಲ್ಲಿ ನಿಲ್ಲಿಸಿದ್ದ ಕಾರಿಗೆ ಬಾಲಕರಿದ್ದ ಕಾರು ಡಿಕ್ಕಿ ಹೊಡೆದಿದೆ. ಸಂಚಾರಿ ಪೊಲೀಸರು ಕಾರನ್ನು ವಶಕ್ಕೆ ಪಡೆದರು. ಅಪಘಾತ ಮಾಡಿದ ಬಾಲಕನ ಪೋಷಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಈ ಅಪಘಾತದ ದೃಶ್ಯವು ಇಲ್ಲಿನ ಸುತ್ತಮುತ್ತಲ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಜನರ ಮೊಬೈಲ್‌ಗಳಲ್ಲಿ ಹರಿದಾಡುತ್ತಿದೆ.
ಸೇವಾ ಜೇಷ್ಠತೆ ಆಧರಿಸಿ ಬಡ್ತಿ ನೀಡಿ
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ ಸಂಬಂಧಿಸಿದಂತೆ 2017ರಲ್ಲಿ ರೂಪಿತಗೊಂಡಿರುವ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮುನ್ನ ನೇಮಕಾತಿಯಾದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪೂರ್ವಾನ್ವಯಗೊಳಿಸಬಾರದು, 2016 ಕ್ಕಿಂತ ಮೊದಲು ನೇಮಕಾತಿ ಆದ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರುಗಳಿಗೆ ಈ ಹಿಂದಿನಂತೆ ಪ್ರೌಢಶಾಲೆಗಳಿಗೆ ವಿದ್ಯಾರ್ಹತೆಯ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ವ್ಯಕ್ತಿಯನ್ನು ಸೊಂಡಲಿನಿಂದ ಎತ್ತಿ ಬಿಸಾಡಿದ ಕಾಡಾನೆ
ಮನೆಯಿಂದ ಸ್ವಲ್ಪ ದೂರದಲ್ಲಿದ್ದ ಅಂಗಡಿಯಿಂದ ಸಾಮಗ್ರಿ ತರಲು ತೆರಳುತ್ತಿದ್ದ ವೇಳೆ ವ್ಯಕ್ತಿ ಮೇಲೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಸೊಂಡಲಿನಿಂದ ಎತ್ತಿ ಬಿಸಾಡಿ ಗಾಯಗೊಳಿಸಿದ ಘಟನೆ ಸಕಲೇಶಪುರ ತಾಲೂಕಿನ ವಡೂರು ಗ್ರಾಮದಲ್ಲಿ ನಡೆದಿದೆ. ಗಾಯಾಳು ಮಹೇಶ್‌ಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್‌ನಲ್ಲಿ ಬಹುಮಾನ
ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಪವರ್ ಲಿಫ್ಟರ್ಸ್ ಸಂಸ್ಥೆ ಮತ್ತು ರಾಜ್ಯ ಪವರ್ ಲಿಫ್ಟರ್ಸ್ ಸಂಸ್ಥೆ ಮಂಗಳೂರು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೪೯ನೇ ಪುರುಷರ ಮತ್ತು ೪೧ನೇ ಮಹಿಳೆಯರ ರಾಜ್ಯ ಸೀನಿಯರ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಸಂಸ್ಥೆ ಅಧ್ಯಕ್ಷರು ಹಾಗೂ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ ವಹಿಸಿದ್ದರು.
ಅಧ್ಯಕ್ಷರಾಗಿ ರಂಗಸ್ವಾಮಿ ಅವಿರೋಧ ಆಯ್ಕೆ
ಕಸಬಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಹಿಂದಿನ ಅಧ್ಯಕ್ಷರಾದ ಕುರುವಂಕ ಕ್ಷೇತ್ರದ ದೇವರಾಜು (ಬೋರೆಗೌಡ) ರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾರಣ, ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸಹಕಾರ ಇಲಾಖೆ ಚುನಾವಣೆ ನಿಗದಿಗೊಳಿಸಿತ್ತು. ಅಧ್ಯಕ್ಷ ಸ್ಥಾನಕ್ಕೆ ಡಿ.ಕಾಳೇನಹಳ್ಳಿ ಕ್ಷೇತ್ರದಿಂದ ನಿರ್ದೇಶಕನಾಗಿ ಆಯ್ಕೆಯಾಗಿದ್ದ ಡಿ.ಸಿ.ರಂಗಸ್ವಾಮಿ ಹೊರತುಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿದ್ದ ಸಹಕಾರ ಇಲಾಖೆ ಅಧಿಕಾರಿ ಡಿ.ಲೀಲಾರವರು ಡಿ.ಸಿ.ರಂಗಸ್ವಾಮಿಯವರ ಆಯ್ಕೆಯನ್ನು ಘೋಷಿಸಿದರು.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 416
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved