ಇ ಖಾತೆ ಮಾಡಿಸಲು ಮಧ್ಯವರ್ತಿಗಳ ಹಾವಳಿಪುರಸಭೆ ವ್ಯಾಪ್ತಿಯಲ್ಲಿ ೧೮ ವಾರ್ಡ್ಗಳನ್ನು ಸ್ಲಂ ಬೋರ್ಡ್ ವ್ಯಾಪ್ತಿಗೆ ಒಳಪಡಿಸಿ, ಬಡವರ ಏಳಿಗೆಗೆ ಶ್ರಮಿಸಲಾಗಿದೆ. ಇತ್ತೀಚಿಗೆ ಈ ಖಾತೆ ಮಾಡಿಸಲು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ದೂರುಗಳು ಬರುತ್ತಿದ್ದು, ಇದೇ ರೀತಿಯಾದರೇ ಲೋಕಾಯುಕ್ತಕ್ಕೆ ದೂರು ನೀಡಿ, ಅಗತ್ಯ ಕ್ರಮಕ್ಕೆ ಸೂಚಿಸುತ್ತೇವೆ. ಆದ್ದರಿಂದ ಅಧಿಕಾರಿಗಳು ಎಚ್ಚರದಿಂದ ಇರಬೇಕು ಎಂದು ಶಾಸಕ ಎಚ್.ಡಿ. ರೇವಣ್ಣ ಸಲಹೆ ನೀಡಿದರು. ಪಟ್ಟಣದ ಪುರಸಭೆ ವ್ಯಾಪ್ತಿಯ ಕವರ್ ಡೆಕ್ ಪಕ್ಕದಲ್ಲಿರುವ ಪತಂಜಲಿ ಯೋಗಭವನದ ಪಕ್ಕದ ಖಾಲಿ ನಿವೇಶನವನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೀಡಲು ಪುರಸಭೆ ಅನುಮೋದನೆ ನೀಡಿದ್ದರೂ ಏಕೆ ನೀಡಿಲ್ಲ, ಪುರಸಭೆಗೆ ನೀಡಲು ಅವಕಾಶವಿದೆ, ಅವರಿಗೆ ನಿವೇಶನ ಮಂಜೂರು ಮಾಡಿಕೊಡಿ ಎಂದು ಸೂಚಿಸಿದರು.