ಇಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಗೌರವ ಸಮರ್ಪಣೆಯನ್ನು ಜಿಲ್ಲಾಧಿಕಾರಿ ಸಿ. ಸತ್ಯಭಾಮ ನಡೆಸಿಕೊಡಲಿದ್ದಾರೆ. ಹಾಸನ ಜಿಲ್ಲಾ ಸರಕಾರಿ ನೌಕರರ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎನ್. ಪರಮೇಶ್, ಕೃಷ್ಣರಾಜ ನಗರದ ತಾಲೂಕು ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಎಚ್.ಎಸ್. ಕರುಣಾಕರ್, ಸಾಧನಾ ಅಕಾಡೆಮಿಯ ಬಿ. ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಿವಸ್ವಾಮಿ, ಡಿಡಿಪಿಐ ಉಪನಿರ್ದೇಶಕ ಎಚ್.ಕೆ. ಪಾಂಡು ಇತರರು ಪಾಲ್ಗೊಳ್ಳುವುದಾಗಿ ಹೇಳಿದರು.