• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ಮನೆಯಲ್ಲೂ ಮಕ್ಕಳಿಗೆ ಕನ್ನಡ ಕಲಿಸಿ
ಪುರಸಭೆ ಅಧ್ಯಕ್ಷ ಎ ಆರ್ ಅಶೋಕ್ ಭುವನೇಶ್ವರಿಗೆ ಪುಷ್ಪಾರ್ಚನೆ ನಡೆಸಿ ಮಾತನಾಡಿ ಕಲೆ, ಸಾಹಿತ್ಯ, ಸಂಸ್ಕೃತಿಯ ತವರೂರು ನಮ್ಮ ಕನ್ನಡ ನಾಡು, ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ. ಕನ್ನಡದ ಪ್ರಥಮ ಶಿಲಾ ಶಾಸನ ನಮ್ಮ ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ಸಿಕ್ಕಿರುವುದು ಕನ್ನಡಿಗರಾದ ನಮಗೆ ಹೆಮ್ಮೆಯ ಸಂಗತಿ ಎಂದರು. ಇಂತಹ ಪವಿತ್ರ ಭಾಷೆಯನ್ನು ಕನ್ನಡಿಗರಾದ ನಾವು ಪ್ರತಿ ಮನೆಯಲ್ಲೂ ಮಕ್ಕಳಿಗೆ ಕಲಿಸಬೇಕು. ನಿತ್ಯವೂ ಕನ್ನಡ, ಎಂದೆಂದಿಗೂ ಕನ್ನಡ ಎನ್ನುವಂತೆ ಕನ್ನಡಿಗರಲ್ಲಿ ಅರಿವು ಮೂಡಿಸಬೇಕು ಎಂದರು.
ಬಿಜಿಎಸ್ ಕಾಲೇಜಿನಲ್ಲಿ ರಕ್ತದ ಗುಂಪು ತಪಾಸಣೆ ಕಾರ್ಯಕ್ರಮ
ರಕ್ತದಾನ ಮಾಡುವುದು, ರಸ್ತೆಸುರಕ್ಷತೆ, ಕನ್ನಡ ನಾಡು, ನುಡಿ, ಜಲ ಇವುಗಳ ಬಗ್ಗೆ ಗಮನ ಹರಿಸಬೇಕೆಂದು ಹೇಳಿದರು. ಪುರಸಭ ಸದಸ್ಯ ಜಗದೀಶ್, ವಿದ್ಯಾರ್ಥಿಗಳಲ್ಲಿ ಇತ್ತೀಚಿನ ದಿನದಲ್ಲಿ ದುಶ್ಚಟದ ಗುಣ ಕಂಡುಬರುತ್ತಿದ್ದು, ಇವುಗಳಿಂದ ದೂರವಿರಬೇಕೆಂದರು. ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಜಿಲ್ಲಾ ಉಪಾಧ್ಯಕ್ಷ ವರುಣಗೌಡ ಅವರು ಚಿಕ್ಕ ವಯಸ್ಸಿನಲ್ಲಿಯೇ ಇಂತಹ ಜನಪರವಾದ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತೋಷ ತಂದಿದೆ ಎಂದು ಪುರಸಭೆ ಅಧ್ಯಕ್ಷ ಎ.ಆರ್‌. ಅಶೋಕ್ ಹೇಳಿದರು.
ಅರೇಹಳ್ಳಿ ಗ್ರಾಮ ಪಂಚಾಯತ್‌ ವಿರುದ್ಧ ಪ್ರತಿಭಟನೆ
ಗ್ರಾಮ ಪಂಚಾಯಿತಿಯು ಸಾರ್ವಜನಿಕ ಆಸ್ತಿಯನ್ನು ರಕ್ಷಿಸಿಕೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ಅರೇಹಳ್ಳಿಯಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಈ ವೇಳೆ ಸ್ಥಳಕ್ಕಾಗಮಿಸಿದ ತಹಸೀಲ್ದಾರ್‌ ಮಮತಾ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ತಹಸೀಲ್ದಾರ್‌ ಸ್ಥಳಕ್ಕಾಗಮಿಸಿ ಒತ್ತುವರಿ ಜಾಗವನ್ನು ಮತ್ತೊಮ್ಮೆ ಪರಿಶೀಲಿಸಿ ಸೂಕ್ತ ನ್ಯಾಯ ಒದಗಿಸಬೇಕೆಂದು ಬಿಗಿ ಪಟ್ಟು ಹಿಡಿದು ಬಿರು ಬಿಸಿನಲ್ಲಿ ಗ್ರಾಪಂ ಅಧಿಕಾರಿಗಳ ಹಾಗೂ ಸದಸ್ಯರ ವಿರುದ್ಧ ಆಕ್ರೋಶ ಹೊರಹಾಕಿದರು.
ವಕ್ಫ್‌ ಕಿತಾಪತಿ ಖಂಡಿಸಿ ಹೊಳೆನರಸೀಪುರದಲ್ಲಿ ಪ್ರತಿಭಟನೆ
ಕರ್ನಾಟಕ ರಾಜ್ಯದಲ್ಲಿ ವಕ್ಫ್‌ ಹೆಸರಿನಲ್ಲಿ ರಾಜ್ಯವನ್ನು ಲೂಟಿ ಮಾಡಲು ಹೊರಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ರೈತರ ಜಮೀನು, ನಮ್ಮ ಮನೆಗಳು, ಸರ್ಕಾರಿ ಕಟ್ಟಡಗಳು, ದೇವಾಲಯಗಳನ್ನು ಉಳಿಸುವ ಸಲುವಾಗಿ ಹೋರಾಟ ಅನಿವಾರ್ಯವಾಗಿದೆ. ನಾವು ಕೈಕಟ್ಟಿ ಕುಳಿತ್ತಿಲ್ಲ. ಹಿಂದೂಗಳನ್ನು ಕೆಣಕಬೇಡಿ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಆಕ್ರೋಶದಿಂದ ಎಚ್ಚರಿಸಿದರು.
ಅಲ್ಪಸಂಖ್ಯಾತರ ಓಲೈಕೆಗೆ ರೈತರ ಜಮೀನು ವಕ್ಫ್‌ ಪಾಲು
ಮುಸ್ಲಿಂ ಓಲೈಕೆ ಕಾಂಗ್ರೆಸ್ ಸರ್ಕಾರ ರೈತರ ಜಮೀನನ್ನು ವಕ್ಫ್‌ ಬೋರ್ಡಿಗೆ ಸೇರಿಸುವ ಸಾಧ್ಯತೆಯಿದೆ. 2013ರಲ್ಲಿ ಇದ್ದ ಯುಪಿಎ ಸರ್ಕಾರ ವಕ್ಫ್ ಬೋರ್ಡ್ ಕಾನೂನು ಯಾವುದೇ ಜಮೀನನ್ನು ತನ್ನ ಹೆಸರಿಗೆ ಬರೆಸಿಕೊಳ್ಳುವ ಇದರ ವಿರುದ್ಧ ಯಾರೇ ಆಗಲಿ ನ್ಯಾಯಾಲಯದಲ್ಲೂ ಪ್ರಶ್ನೆ ಮಾಡಲಾರದಂತ ಹಕ್ಕನ್ನು ನೀಡಲಾಗಿದೆ. ಜಮೀರ್‌ ಅಹಮ್ಮದ್ ಎಂಬ ಕೋಮುವಾದಿ ಸಚಿವ ಅಷ್ಟರೊಳಗೆ ಸಾವಿರಾರು ಎಕರೆ ರೈತರ ಜಮೀನನ್ನು ವಕ್ಫ್‌ ಮಂಡಳಿಗೆ ಸೇರಿಸಲು ಹುನ್ನಾರ ನಡೆಸಿದ್ದು, ಈ ಹಿನ್ನೆಲೆಯಲ್ಲಿ ತಕ್ಷಣವೇ ಸರ್ಕಾರ ಜಮೀರ್‌ ಅಹಮ್ಮದ್ ಖಾನ್ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.
ಹೆಬ್ಬಸಾಲೆ ಗ್ರಾಪಂ ಅಧ್ಯಕ್ಷರಾಗಿ ನೇತ್ರಾವತಿ ಅವಿರೋಧ ಆಯ್ಕೆ
ಹೆಬ್ಬಸಾಲೆ ಗ್ರಾಮ ಪಂಚಾಯಿತಿ ನೂತನ ಅಧಕ್ಷರಾಗಿ ಬಿಜೆಪಿ ಬೆಂಬಲಿತ ನೇತ್ರಾವತಿ ಮೇಘರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು ೧೪ ಸದಸ್ಯ ಬಲದ ಹೆಬ್ಬಸಾಲೆ ಗ್ರಾಪಂನಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿದ್ದು ಈ ಹಿಂದಿನ ಅಧ್ಯಕ್ಷರಾದ ಶಿವಕುಮಾರಿ ಆಂತರಿಕ ಒಪ್ಪಂದದಂತೆ ರಾಜೀನಾಮೆ ನೀಡಿದ್ದರಿಂದ ಮಂಗಳವಾರ ಚುನಾವಣೆ ನಡೆದು ನೇತ್ರಾವತಿ ಮೇಘರಾಜ್ ಅವಿರೋಧವಾಗಿ ಆಯ್ಕೆಯಾದರು.
ಶಾಸಕ ಬಾಲಕೃಷ್ಣ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪ
ತಾಲೂಕಿನ ಎಲ್ಲಾ ಕಚೇರಿಗಳಲ್ಲೂ ಭ್ರಷ್ಟಾಚಾರ ಹೆಚ್ಚಾಗಿದೆ. ಇದಕ್ಕೆ ಮೂಲ ಕಾರಣಕರ್ತರಾದ ಶಾಸಕರೇ ನೇರವಾಗಿ ತಾಲೂಕಿನಲ್ಲಿ ಅಪಾರ ಆಸ್ತಿ ಮಾಡಬೇಕೆಂಬ ಉದ್ದೇಶವನ್ನು ಇಟ್ಟುಕೊಂಡು ತಾಲೂಕಿನ ಎಲ್ಲಾ ಕಚೇರಿಗಳಲ್ಲೂ ಕೂಡ ಸಾರ್ವಜನಿಕರ ಕೆಲಸ ಮಾಡಲು ಭ್ರಷ್ಚಾಚಾರದ ಹಣದ ಹೊಳೆಯೇ ಹರಿಯುತ್ತಿದೆ. ಇದನ್ನು ಪ್ರಶ್ನಿಸಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಇದಕ್ಕೆ ಮೂಲ ಕಾರಣ ಸ್ಥಳೀಯ ಶಾಸಕ ಸಿ. ಎನ್. ಬಾಲಕೃಷ್ಣ ಎಂದು ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಕುಮಾರ್‌ ಆರೋಪಿಸಿದ್ದಾರೆ.
ರಾಜ್ಯ ಮಟ್ಟದ ಪ್ರಸೂತಿ ಸ್ತ್ರೀರೋಗ ತಜ್ಞರ ಸಮಾವೇಶ
ಕರ್ನಾಟಕ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘದ ವತಿಯಿಂದ ನವೆಂಬರ್ ೮ರಂದು ಹಿಮ್ಸ್ ಸಭಾಂಗಣದಲ್ಲಿ ೩೪ನೇ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘದ ಅಧ್ಯಕ್ಷೆ ಡಾ. ಭಾರತಿ ರಾಜಶೇಖರ್‌ ತಿಳಿಸಿದರು. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಉತ್ತಮ ವಾಗ್ಮಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಕೂಡಿದ ವಿಚಾರ ವಿನಿಮಯಗಳಿಗೆ ಈ ಸಮಾವೇಶ ಸಜ್ಜಾಗಿದೆ ಎಂದರು.
ರೈತರ ಬಗ್ಗೆ ಪತ್ರಕರ್ತರ ಕಾಳಜಿ ಶ್ಲಾಘನೀಯ
ರೈತರ ಬವಣೆಗಳ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಪತ್ರಕರ್ತರು ಸಭೆ ಸೇರಿ ಚರ್ಚೆ ಮಾಡಿರುವುದು ಸ್ವಾಗತಾರ್ಹವಾಗಿದೆ. ಪತ್ರಕರ್ತರು ಹೆಜ್ಜೆ ಇಟ್ಟಲ್ಲಿ ಯಾವುದು ಅಸಾಧ್ಯವಲ್ಲ ಎಂದು ಶಾಸಕ ಹಾಗೂ ರಾಜ್ಯ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಇತ್ತೀಚೆಗೆ ತಿಪಟೂರಿನಲ್ಲಿ ನಡೆದ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಿ, ಯಶಸ್ವಿಗೊಳಿಸಿದ ತಿಪಟೂರು ತಾಲೂಕು ಕಾರ್ಯನಿರತ ಪತ್ರಕರ್ತರು ಮತ್ತು ಗಣ್ಯರಿಗೆ ನಗರದ ಆದರ್ಶ್ ಫಾರಂ ಹೌಸ್‌ನಲ್ಲಿ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಮಟ್ಟಕ್ಕೆ ಜಾಯ್ಸ್‌ಟನ್ ಡಿಸೋಜಾ ಆಯ್ಕೆ
ಬೇಲೂರು ತಾಲೂಕಿನ ಅರೇಹಳ್ಳಿಯ ಅಂಬೇಡ್ಕರ್‌ ನಗರದ ಅನುಗ್ರಹ ಆಂಗ್ಲಮಾಧ್ಯಮ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಜಾಯ್ಸ್‌ಟನ್ ಡಿಸೋಜಾರವರು, ಕೇವಲ ೨೬ ಸೆಕೆಂಡ್‌ನಲ್ಲಿ ೨೦೦ಮೀ. ಓಟದ ಗುರಿ ತಲುಪಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಬೇಲೂರು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ೧೪ರಿಂದ ೧೭ ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ನಡೆಯಿತು.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 510
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved