ಕೋಗಿಲೆಮನೆ ಗ್ರಾಪಂ ಅಧ್ಯಕ್ಷರಾಗಿ ನಿಂಗೇಗೌಡ ಆಯ್ಕೆಬೇಲೂರು ತಾಲೂಕಿನ ಕೋಗಿಲೆಮನೆ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ನಿಂಗೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ವೇಳೆ ಗ್ರಾಮಸ್ಥರಿಂದ ಹಾಗೂ ಸದಸ್ಯರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಲಾಗುತ್ತದೆ ಎಂದರು. ಈ ವೇಳೆ ಗ್ರಾಮಸ್ಥರು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಹರ್ಷ ವ್ಯಕ್ತಪಡಿಸಿದರು.