ನರೇಗಾ ಸೌಲಭ್ಯ ಪೂರ್ಣ ಪ್ರಮಾಣದಲ್ಲಿ ಬಳಸಿ ಹಾಸನ ತಾಲೂಕು ಪಂಚಾಯಿತಿ ವ್ಯಾಪ್ತಿಯ ಕಾರ್ಲೆ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ನಡೆ ರೈತರ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು, ನರೇಗಾ ಸೌಲಭ್ಯವನ್ನು ಬಳಸಿಕೊಳ್ಳಲು ಕರೆ ನೀಡಿದರು. ಇದೇ ವೇಳೆ ಶಾಸಕರು ನರೇಗಾ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೊಟ್ಟಿಗೆ, ತೆಂಗು, ಅಡಿಕೆ, ಬಾಳೆ ಸೇರಿದಂತೆ ವಿವಿಧ ಸೌಲಭ್ಯಗಳ ವೈಯಕ್ತಿಕ ಕಾರ್ಯಾದೇಶ ಪ್ರತಿಯನ್ನು ವಿತರಿಸಿದರು.