ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಆಗ್ರಹಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಸಂಬಂಧ ಕಾಯ್ದೆ ರೂಪಿಸಿ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡದ ನೆಲದಲ್ಲಿ ಸ್ಥಾಪಿತವಾಗಿರುವ ಖಾಸಗಿ ಸಂಸ್ಥೆಗಳು ಹೊರ ರಾಜ್ಯಗಳ ಮಾನವ ಸಂಪನ್ಮೂಲ ಅಧಿಕಾರಿಗಳನ್ನೇ ನೇಮಿಸಿಕೊಳ್ಳುತ್ತಿದ್ದು, ಅವರು ತಮ್ಮ ತಮ್ಮ ರಾಜ್ಯದ ಯುವಕ ಯುವತಿಯರನ್ನು ಕರೆತಂದು ಕೆಲಸ ಕೊಡುತ್ತಿದ್ದಾರೆ. ಮೊದಲು ಕನ್ನಡಿಗರಿಗೆ ಆದ್ಯತೆ ದೊರೆಯುವಂತಾಗಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.