ತೈಲ ಬೆಲೆ ಏರಿಕೆ ಖಂಡಿಸಿ ಚನ್ನರಾಯಪಟ್ಟಣದಲ್ಲಿ ಬಿಜೆಪಿ ಪ್ರತಿಭಟನೆಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ಚನ್ನರಾಯಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಕೆ.ಆರ್.ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಮುಖಂಡರು, ಕಾರ್ಯಕರ್ತರು ನೂರಾರು ಮಂದಿ ಭಾಗಿಯಾಗಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ತೊಲಗಲಿ ತೊಲಗಲಿ ಕಾಂಗ್ರೆಸ್ ಸರ್ಕಾರ ತೊಲಗಲಿ ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.