ಶಿಲುಬೆ ಬೆಟ್ಟದ ಗಣಿಗಾರಿಕೆ ಖಂಡಿಸಿ ಪ್ರತಿಭಟನೆಹಸು, ಕುರಿ ಜೊತೆ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದರು. ಇದೇ ವೇಳೆ ಜಯಬಸವಾನಂದ ಸ್ವಾಮೀಜಿ ಮಾಧ್ಯಮದೊಂದಿಗೆ ಮಾತನಾಡಿ, ಗಣಿಗಾರಿಕೆ ಸ್ಫೋಟದಿಂದ ಸುತ್ತಮುತ್ತಲಿನ ಮನೆಗಳಲ್ಲಿ ಬಿರುಕು ಉಂಟಾಗಿದ್ದು, ಭಾರಿ ವಾಹನ ಸಂಚಾರದಿಂದ ರಸ್ತೆಗಳು ಹಾಳಾಗಿವೆ. ಕಾಡು ಪ್ರಾಣಿಗಳು ಗ್ರಾಮಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿವೆ. ಶಾಲಾ ಬಸ್ಸುಗಳು ಹಾಳಾದ ರಸ್ತೆಯಿಂದ ಸಂಚಾರ ನಿರಾಕರಿಸಿರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆ ಆಗಿದೆ. ಮಳೆಗಾಲದಲ್ಲಿ ಕಲುಷಿತ ನೀರು ಮತ್ತು ಧೂಳು ಹೊಲಗಳಿಗೆ ಹರಿದು ಕಾಫಿ, ಮೆಣಸು, ಭತ್ತದ ಬೆಳೆ ಹಾನಿಯಾಗುತ್ತಿದೆ. ಹೊಸಮಠ, ಕಲ್ಲುಕೊಪ್ಪಲು, ಮಟದಕೊಪ್ಪಲು, ಹಾರೋಹಳ್ಳಿ, ನವಿಲಹಳ್ಳಿ, ಬಡಗಿಕೊಪ್ಪಲು, ದಿಣ್ಣೆಕೊಪ್ಪಲು ಮುಂತಾದ ಹಳ್ಳಿಗಳ ಜನತೆ "ಗಣಿಗಾರಿಕೆ ನಿಲ್ಲಿಸಬೇಕು " ಎಂದು ಒಗ್ಗಟ್ಟಿನಿಂದ ಧ್ವನಿ ಎತ್ತಿದ್ದಾರೆ ಎಂದರು.