ಗ್ರಾಮೀಣ ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿ: ಹಾಸನದ ನಿವೃತ್ತ ಖಜಾನಾಧಿಕಾರಿ ರಾಮ್ ಗಿರಿ ನಾಯಕ್ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಹೆಚ್ಚಿನ ರೀತಿಯಲ್ಲಿ ಮಹತ್ವ ನೀಡಬೇಕು ಎಂದು ಹಾಸನದ ನಿವೃತ್ತ ಖಜಾನಾಧಿಕಾರಿ ರಾಮ್ ಗಿರಿ ನಾಯಕ್ ತಿಳಿಸಿದರು. ಹಳೆಬೀಡಿನಲ್ಲಿ ಬಂಡಿಲಕ್ಕನ ಕೊಪ್ಪಲಿನಲ್ಲಿ ಆಯೋಜಿಸಿದ್ದ ೧ರಿಂದ ೭ನೇ ತರಗತಿಯ ಮಕ್ಕಳಿಗೆ ಶಾಲಾ ಸಾಮಗ್ರಿ ನೋಟ್ ಬುಕ್, ಶಾಲಾ ಬ್ಯಾಗ್, ಹಾಗೂ ಟ್ರ್ಯಾಕ್ ಸೂಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.