ಜಾನಪದ ಕಲೆ ಉಳಿಸಲು ಯುವ ಪೀಳಿಗೆಗೆ ಅರಿವು ಮೂಡಿಸಿಜಾನಪದ ಕಲೆ ಉಳಿಸುವ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಾಗೂ ವೈಡಿಡಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹೆಬ್ಬಾಳು ಹಾಲಪ್ಪ ಹೇಳಿದರು. ಜೀವನದಲ್ಲಿ ಸಾಧನೆ ಮಾಡಿದ ಮಹನೀಯರು ಪ್ರೇರಣೆಯಾಗಬೇಕು, ಕಂಸಾಳೆ ಪದ, ಗೀಗಿಪದ, ಕೋಲಾಟದ ಪದ, ರಾಗಿ ಬೀಸೋ ಪದ, ಸುಗ್ಗಿ ಹಾಡುಗಳು, ಹೀಗೆ ಇನ್ನೂ ಅನೇಕ ವಿವಿಧ ಬಗೆಯ ಜಾನಪದ ಗೀತೆಗಳು ಆಯಾ ಪ್ರದೇಶದ ಜನರ ದೈನಂದಿನ ಚಟುವಟಿಕೆಗಳನ್ನು, ಕೌಟುಂಬಿಕ ಜೀವನವನ್ನು ತೆರೆದಿಡುತ್ತವೆ ಎಂದರು.