ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡಿದ್ದ ಒಡೆಯರ್: ಪ್ರಶಾಂತ್ ಕುಮಾರ್ಬಡತನ ನಿರ್ಮೂಲನೆ ಮತ್ತು ಗ್ರಾಮೀಣ ಮೂಲಸೌಕರ್ಯಗಳನ್ನು ಅಭಿವೃದ್ಧಿಗೊಳಿಸಲು ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ಆಡಳಿತ ಅವಧಿಯಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು ಎಂದು ಪೂರ್ಣಪ್ರಜ್ಞ ವಿದ್ಯಾಸಂಸ್ಥೆ ಪ್ರಾಂಶುಪಾಲ ಪ್ರಶಾಂತ್ ಕುಮಾರ್ ಹೇಳಿದರು. ಬೇಲೂರಿನಲ್ಲಿ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.