ಅಹಿಂಸಾವಾದದ ಅಪ್ರತಿಮ ಪ್ರತಿಪಾದಕ ಗಾಂಧೀಜಿಭಾರತದ ಸ್ವಾತಂತ್ರ್ಯ ಹೋರಾಟಗಾರ, ಅಹಿಂಸಾವಾದದ ಪ್ರತಿಪಾದಕ, ಅಪ್ರತಿಮ ರಾಷ್ಟ್ರೀಯ ನಾಯಕರಾದ ಮಹಾತ್ಮ ಗಾಂಧಿಯವರು ಜನ್ಮ ದಿನವನ್ನು ಭಾರತಾದ್ಯಂತ ಗಾಂಧಿ ಜಯಂತಿಯನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ಶಾಸಕ ಸಿ. ಎನ್ ಬಾಲಕೃಷ್ಣ ತಿಳಿಸಿದರು. ನಗರದ ಗಾಂಧಿ ವೃತದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಭಾರತದ ಸ್ವಾತಂತ್ರ್ಯ ಚಳವಳಿಗೆ ಅವರು ನೀಡಿದ ಅಪ್ರತಿಮ ಕೊಡುಗೆಯನ್ನು ಸ್ಮರಿಸಬೇಕಾಗಿದೆ. ಭಾರತದಲ್ಲಿ ಗಾಂಧಿ ಜಯಂತಿಯನ್ನು ರಾಷ್ಟ್ರೀಯ ರಜಾ ದಿನವಾಗಿ ಆಚರಿಸಲಾಗುತ್ತದೆ ಎಂದರು.