ಬೆಳಗುಂಬ ಸೊಸೈಟಿ ಅಧ್ಯಕ್ಷರಾಗಿ ಗುರುಪ್ರಸಾದ್ ಆಯ್ಕೆಕಸಬಾ ಹೋಬಳಿ ಬೆಳಗುಂಬ ಸೊಸೈಟಿ ಅಧ್ಯಕ್ಷರಾಗಿ ಗುರುಪ್ರಸಾದ್, ಉಪಾಧ್ಯಕ್ಷರಾಗಿ ಬಿ.ಜಿ.ಚೇತನ ಅವಿರೋಧವಾಗಿ ಆಯ್ಕೆಯಾದರು ಎಂದು ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿ ದೇವರಾಜ್ ಅವರು ಘೋಷಿಸಿದರು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ನಿರ್ದೇಶಕರು ಸುತ್ತಮುತ್ತಲಿನ ಗ್ರಾಮಸ್ಥರು, ಸಂಘ ಸಂಸ್ಥೆ ಮುಖಂಡರು, ಷೇರುದಾರರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳನ್ನು ಅಭಿನಂದಿಸಿದರು.