ಸಕಲೇಶಪುರದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಎಲ್ಲ ಮೊಬೈಲ್ ಆ್ಯಪ್‌ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿದ್ದಾರೆ. ಇದರಿಂದ ಮಾನಸಿಕ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗಿವೆ. ಆಧಾರ್ ಸೀಡಿಂಗ್, ಬಗರ್‌ಹುಕುಂ, ಹಕ್ಕುಪತ್ರ, ನಮೂನೆ 1-5ರ ವೆಬ್ ಅಪ್ಲಿಕೇಷನ್, ಪೌತಿ ಆಂದೋಲನ ಆ್ಯಪ್ ಹೀಗೆ ಹತ್ತಾರು ಆ್ಯಪ್‌ಗಳಲ್ಲಿ ಏಕಕಾಲಕ್ಕೆ ಕೆಲಸ ಮಾಡಬೇಕಿದೆ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ. ಇದರಿಂದ ಬೇಸತ್ತು ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ಗ್ರಾಮ ಆಡಳಿತ ಅಧಿಕಾರಿಗಳು ತಿಳಿಸಿದರು.