ಶ್ರವಣಬೆಳಗೊಳದಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಘಟಕ ಆರಂಭಬಾಹುಬಲಿ ಆಸ್ಪತ್ರೆಯು ಈ ಭಾಗದ ಜನರಿಗೆ ಆಶಾಕಿರಣವಾಗಿದ್ದು, ಉತ್ತಮ ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷೆ ಪದ್ಮಿನಿ ಪದ್ಮರಾಜ್ ಹೇಳಿದರು. ಶ್ರವಣಬೆಳಗೊಳದಲ್ಲಿ ಶ್ರೀ ಬಾಹುಬಲಿ ಆಸ್ಪತ್ರೆಯಲ್ಲಿ ಶುಕ್ರವಾರ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.