ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆ ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯರೈತರಿಗೆ ಬಿತ್ತನೆ ಬೀಜ, ಗೊಬ್ಬರ ಹಾಗೂ ಕ್ರಿಮಿನಾಶಕಗಳ ಲಭ್ಯತೆಯು ಯಾವುದೇ ರೀತಿ ಕೊರತೆಯಾಗದಂತೆ ಜಿಲ್ಲಾಧಿಕಾರಿಗಳು ಆದ್ಯತೆಯಲ್ಲಿ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಡಿಯೋ ಸಂವಾದ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರಗಾಲ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.