ಕನ್ನಡ ನಾಡು ನುಡಿ ರಕ್ಷಣೆಗೆ ಪ್ರತಿಯೊಬ್ಬರೂ ಹೋರಾಡಬೇಕುಕನ್ನಡ ನಾಡು, ನುಡಿ, ನೆಲ, ಜಲದ ರಕ್ಷಣೆಗಾಗಿ ಪ್ರತಿಯೊಬ್ಬರೂ ಸಂಘಟಿತರಾಗಿ ಹೋರಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸತೀಶ್ ಪಟೇಲ್ ಕರೆ ನೀಡಿದರು. ಆಲೂರು ತಾಲೂಕಿನಲ್ಲಿಯೂ ಸಹ ಹಲವಾರು ಜ್ವಲಂತ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತಿ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ನಡೆಸಿ ಹಲವು ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಟ್ಟಿದೆ ಎಂದು ತಿಳಿಸಿದರು.