• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್‌ಎಲ್‌ಬಿ ವಿದ್ಯಾರ್ಥಿಗಳು ಗ್ರಾಮೀಣ ಜನರಿಗೆ ಕಾನೂನು ಸಲಹೆ ನೀಡಿ
ಭಾರತೀಯ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ನೆರವು ದೊರೆಯಬೇಕು ಮತ್ತು ತಾರತಮ್ಯ ಹಾಗೂ ವಂಚನೆಗೆ ಒಳಗಾಗಬಾರದು ಎಂಬ ದೃಷ್ಠಿಯಿಂದ ಎಲ್ಲರೂ ಸಮಾನರು ಎಂದು ಪರಿಗಣಿಸಿ, ಅಗತ್ಯ ಸೌಲಭ್ಯವನ್ನು ಕಲ್ಪಿಸಿದೆ. ಪುಟ್ಟ ಮಕ್ಕಳಿಗೆ, ಶಿಕ್ಷಣವಿಲ್ಲದ ಜನರಿಗೆ ಕಾನೂನಿನ ಅರಿವು ಮೂಡಿಸಲು ಸಾಧ್ಯವಿಲ್ಲ, ಆದ್ದರಿಂದ ವಿದ್ಯಾರ್ಥಿಗಳಾದ ನಿಮಗೆ ಈ ವಿಷಯದಲ್ಲಿ ಅಗತ್ಯ ಅರಿವು ಮೂಡಿಸುವ ಕಾರ್ಯಕ್ರಮ ಉಪಯುಕ್ತವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿ ಮಠ್ ಕಾನೂನು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಕ್ಫ್ ಬೋರ್ಡ್‌ ಕ್ಯಾನ್ಸರ್‌ನಂತೆ ವ್ಯಾಪಿಸುತ್ತಿದೆ : ಕೇಂದ್ರ ಸರ್ಕಾರ 44 ಅಂಶವನ್ನು ತಿದ್ದುಪಡಿಗೆ ಮುಂದಾಗಿರುವುದು ಶ್ಲಾಘನೀಯ

ಕೇಂದ್ರ ಸರ್ಕಾರ ವಕ್ಫ್ ಬೋರ್ಡ್‌ನ 44 ಅಂಶವನ್ನು ತಿದ್ದುಪಡಿಗೆ ಮುಂದಾಗಿರುವುದು ಶ್ಲಾಘನೀಯ ಎಂದು ಶ್ರೀರಾಮಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು.

ಸಮತೋಲಿತ ಜೀವನಕ್ಕೆ ಕ್ರೀಡೆ ಅತ್ಯಗತ್ಯ
ಜೀವನದಲ್ಲಿ ಸಂಭವಿಸುವ ಏಳುಬೀಳುಗಳನ್ನು ಸಮಾನ ಮನಸ್ಥಿತಿಯಲ್ಲಿ ಸ್ವೀಕರಿಸಲು ಕ್ರೀಡೆ ಅತಿ ಮುಖ್ಯ ಎಂದು ಮಾಜಿ ಅಂತಾರಾಷ್ಟ್ರೀಯ ಕ್ರೀಡಾಪಟು ಬರಾಳು ಪ್ರಕಾಶ್‌ ಹೇಳಿದರು. ನಗರದ ರಾಜೀವ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸೆಂಟ್ರಲ್ ಕರ್ನಾಟಕ ಝೋನ್ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯನ್ನು ಜೀವನದ ಒಂದು ಭಾಗವಾಗಿ ಸ್ವೀಕರಿಸಿ ಆ ಮೂಲಕ ಉತ್ತಮ ಆರೋಗ್ಯ ಹೊಂದುವಂತೆ ಸಲಹೆ ನೀಡಿದರು.
ಒಳ ಮೀಸಲಾತಿ ಶೀಘ್ರ ಜಾರಿಗೆ ಮಾರಸಂದ್ರ ಮುನಿಯಪ್ಪ ಆಗ್ರಹ
ಸುಪ್ರೀಂ ಕೋರ್ಟಿನ ತೀರ್ಪಿನಂತೆ ಒಳ ಮೀಸಲಾತಿ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದ ಸಚಿವ ಸಂಪುಟ ಕೂಡ ಸಮ್ಮತಿ ಸೂಚಿಸಿರುವುದಕ್ಕೆ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಸ್ವಾಗತಿಸುತ್ತದೆ. ವಿಳಂಬ ಮಾಡದೇ ಜಾರಿಗೆ ತರಬೇಕು. ಜೊತೆಗೆ ರಾಜ್ಯ ಸರ್ಕಾರವು ತಕ್ಷಣ ಕಾಂತರಾಜ ವರದಿಯನ್ನು ಕೂಡ ಜಾರಿ ಮಾಡಬೇಕೆಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಗ್ರಹಿಸಿದರು. ಮೇಲ್ಜಾತಿಗಳ ಒತ್ತಡಕ್ಕೆ ಮಣಿಯದೆ ರಾಜ್ಯ ಸರ್ಕಾರವು ಕಾಂತರಾಜ ವರದಿಯನ್ನು ತಕ್ಷಣದಿಂದ ಜಾರಿಗೆ ತರಬೇಕೆಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಒತ್ತಾಯಿಸುತ್ತದೆ ಎಂದು ಹೇಳಿದರು.
ಮಕ್ಕಳು ಚಿಕ್ಕಂದಿನಿಂದಲೇ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು
ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ನಾಯಕತ್ವದ ಗುಣ ಹಾಗೂ ಸಾಮಾಜಿಕ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಪಾಳ್ಯ ಗ್ರಾಮಪಂಚಾಯಿತಿ ಅಧ್ಯಕ್ಷೆ ಭವ್ಯ ಪುರುಷೋತ್ತಮ್ ತಿಳಿಸಿದರು. ಭಾರತದಲ್ಲಿ ಎನ್‌ಎಸ್‌ಎಸ್ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮವನ್ನು ಅರಿಯುವುದರ ಜೊತೆಗೆ ಶಿಸ್ತು, ಭಾತೃತ್ವ, ಸಂಯಮ, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು.
ಕೇರಳಾಪುರ ಸೊಸೈಟಿ ಅಧ್ಯಕ್ಷರ ಅವಿರೋಧ ಆಯ್ಕೆ
ಕೇರಳಾಪುರ ಗ್ರಾಮದ ಕೃಷಿಪತ್ತಿನ ಸಹಕಾರಿ ಸಂಘದ ಉಳಿದ ಅವಧಿಗೆ ಅವಿರೋಧವಾಗಿ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಸುರೇಶ್‌ ಅಧ್ಯಕ್ಷರಾಗಿ ಆಯ್ಕೆಯಾದವರು. ಹಾಗೆಯೇ ಉಪಾಧ್ಯಕ್ಷರಾಗಿ ಶಿವಮೂರ್ತಿಯವರು ಅವಿರೋಧವಾಗಿ ಆಯ್ಕೆಯಾದರು. ನೂತನ ಅಧ್ಯಕ್ಷರಾದ ಸುರೇಶ್‌ರವರು ಮಾತನಾಡಿ, ರೈತರಿಗೆ ಹೆಚ್ಚಿನ ನೆರವು ಒದಗಿಸಲು ಶ್ರಮಿಸುವುದಾಗಿ ತಿಳಿಸಿ ಎಲ್ಲರ ಸಹಕಾರ ಕೋರಿದರು.
ದಾನಿಗಳಿಂದ ಸರ್ಕಾರಿ ಶಾಲೆಗೆ ಕಂಪ್ಯೂಟರ್‌ ಮತ್ತು ಪ್ರಿಂಟರ್ ಕೊಡುಗೆ
ಹಳೇಬೀಡು ಹೋಬಳಿ ಕರಿಕಟ್ಟೆಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಮಾಧ್ಯಮಿಕ ಪಾಠಶಾಲೆಗೆ ದಾನಿಗಳಾದ ದಯಾನಂದ್ ಕಾವ್ಯ ಅವರು ತಮ್ಮ ಹಿರಿಯರ ಹೆಸರಿನಲ್ಲಿ ಕಂಪ್ಯೂಟರ್, ಪ್ರಿಂಟರ್ ಸೇರಿದಂತೆ ಇನ್ನಿತರ ಪರಿಕರಗಳನ್ನು ಕೊಡುಗೆಯಾಗಿ ನೀಡಿದರು. ಮಕ್ಕಳಿಗೆ ಪಠ್ಯದ ಜೊತೆಯಲ್ಲಿ ತಾಂತ್ರಿಕ ವಿಷಯಗಳನ್ನು ಪಾಠ ಮಾಡುವುದು ಕೂಡ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಕಂಪ್ಯೂಟರ್‌ ಬಳಕೆಯನ್ನು ಮಾಡಿಕೊಳ್ಳುವುದರ ಮೂಲಕವಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
ವ್ಯವಹಾರಿಕ ಜ್ಞಾನ ಹೆಚ್ಚಿಸಲು ಮಕ್ಕಳ ಸಂತೆ ಸಹಕಾರಿ
ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಸಂತೆಯನ್ನು ಉದ್ಘಾಟಿಸಿ ಪ್ರಾಂಶುಪಾಲ ಪ್ರಶಾಂತ್ ಕುಮಾರ್‌, ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಲ್ಲಿರುವ ವ್ಯವಹಾರಿಕ ಜಾಣ್ಮೆಯನ್ನು ಗುರುತಿಸಲು ಮಕ್ಕಳ ಸಂತೆ ಸಹಕಾರಿಯಾಗಲಿದೆ ಎಂದರು. ಮಕ್ಕಳಿಗೆ ಪಠ್ಯ ಚಟುವಟಿಕೆಗಳ ಜೊತೆಗೆ ಆರ್ಥಿಕ ವ್ಯವಹಾರದ ಬಗ್ಗೆ ತಿಳಿಸುವುದರಿಂದ ಅವರ ಬೌದ್ಧಿಕ ಜ್ಞಾನ ವಿಕಾಸ ಮತ್ತು ವ್ಯಕ್ತಿತ್ವ ರೂಪುಗೊಳ್ಳುವುದಕ್ಕೆ ಸಹಕಾರಿಯಾಗುತ್ತದೆ ವ್ಯವಹಾರ ಜ್ಞಾನ ಹೆಚ್ಚುತ್ತದೆ ಎಂದರು.
ಕಾಡಾನೆಗಳನ್ನು ಶಾಶ್ವತವಾಗಿ ಓಡಿಸದಿದ್ದರೆ ಬೃಹತ್ ಹೋರಾಟ
ಬೇಲೂರು-ಆಲೂರು-ಸಕಲೇಶಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಆದಷ್ಟು ಬೇಗ ಸ್ಥಳಾಂತರ ಅಥವಾ ದೂರದ ಕಾಡಿಗೆ ಶಾಶ್ವತವಾಗಿ ಓಡಿಸಬೇಕು. ಇನ್ನು ಹತು ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೇ ನಮ್ಮ ಸಂಘಟನೆಯಿಂದ ರೈತರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಧರಣಿ ಮಾಡುವುದಾಗಿ ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಕೆ.ಆರ್‌. ಸೋಮೇಶ್ ಎಚ್ಚರಿಸಿದರು. ಕಾಡಾನೆಗಳು ಪ್ರಾರಂಭದಲ್ಲೆ ಬಂದಂತಹ ಸಂದರ್ಭದಲ್ಲಿ ಸರ್ಕಾರ, ಜಿಲ್ಲಾಡಳಿತ, ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಆನೆಗಳನ್ನು ದೂರದ ಕಾಡಿಗೆ ಓಡಿಸಿದ್ದರೆ ಇಂದಿನ ಸ್ಥಿತಿ ಬರುತ್ತಿರಲಿಲ್ಲ ಎಂದರು.
ವಕೀಲ ದೇವರಾಜೇಗೌಡ ವಿರುದ್ಧ ಕಾಂಗ್ರೆಸ್ ಮುಖಂಡರ ಆಕ್ರೋಶ
ಹಾಸನಾಂಬ ಉತ್ಸವ ಯಶಸ್ವಿಯಾಗಿದೆ ಎಂದು ನಾವು ಸ್ವಾಗತ ಮಾಡಬೇಕೇ ಹೊರೆತು ಈ ಚಿಲ್ಲರೆ ಕಾಸಿನ ದೇವರಾಜೇಗೌಡ ಮಾಡುತ್ತಿರುವ ಈ ಆರೋಪ ಸುಳ್ಳು ಆರೋಪ ಎಂದು ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ್‌ ಹೇಳಿದರು. ಇವರು ರಾಜಕೀಯಪ್ರೇರಿತವಾಗಿ ಆರೋಪ ಮಾಡುತ್ತಿದ್ದಾರೆ. ಇವರು ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದುದ್ದು. ಇನ್ನೊಂದು ಮಂತ್ರಿಗಳಿಗೆ ಕಪ್ಪು ಮಸಿ ಬಳಿಯುದಾಗಿ ಹೇಳಿದ್ದಾನೆ. ಈತನಿಗೆ ತಾಕತ್ತು, ಧಮ್‌ ಇದ್ದರೆ ಮಂತ್ರಿಗಳ ಮುಂದೆ ನಿಂತು ಮಾತಾಡಲಿ. ಅಷ್ಟು ಧೈರ್ಯ ಇದ್ದಿದ್ದರೆ ಮಂತ್ರಿಗಳ ಜೊತೆ ಮಾತನಾಡುತಿದ್ದ, ಈ ರೀತಿ ಮಾಧ್ಯಮದ ಮುಂದೆ ಹೋಗುತ್ತಾ ಇರಲಿಲ್ಲ ಎಂದು ಸವಾಲು ಹಾಕಿದರು.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 555
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved