ಗಣೇಶೋತ್ಸವದಲ್ಲಿ ಜೋಡಿ ಎತ್ತುಗಳ ಪ್ರದರ್ಶನ ಸ್ಪರ್ಧೆಆಲೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ " ಎತ್ತುಗಳ ಪ್ರದರ್ಶನ " ಸಾರ್ವಜನಿಕರ ಗಮನ ಸೆಳೆಯಿತು. ಮೊದಲ ಬಾರಿಗೆ ವಿಶೇಷವಾಗಿ ಜೋಡೆತ್ತುಗಳ ಪ್ರದರ್ಶನ ಆಯೋಜನೆ ರೈತರ ಉತ್ಸಾಹವನ್ನು ಹೆಚ್ಚಿಸಿತ್ತು. ರೈತರು ಎತ್ತುಗಳನ್ನು ವಿಶೇಷವಾಗಿ ಅಲಂಕರಿಸಿದ್ದರು. ಎತ್ತುಗಳ ಕೋಡುಗಳಿಗೆ ಕೋಡಂಣ್ಸು, ಗೊಂಡೆ, ಕೊರಳಿಗೆ ಗುಗ್ಗರಿ, ಹಣೆಗೆಜ್ಜೆ, ಮೈಮೇಲೆ ಜೂಲು, ನೋಡುಗರ ಕಣ್ಣು ಎತ್ತುಗಳ ಮೇಲೆ ಬೀಳದಿರಲಿ ಎಂದು ರೈತರು ಕರಿಹಗ್ಗ ಕಟ್ಟಿದ್ದರು.