• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಹುಲ್‌ಗಾಂಧಿ ಹೇಳಿಕೆ ಖಂಡಿಸಿ ಸಕಲೇಶಪುರದಲ್ಲಿ ಬಿಜೆಪಿ ಪ್ರತಿಭಟನೆ
ಕಳೆದ ಲೋಕಭಾ ಚುನಾವಣೆ ಸಂರ್ಧಭದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ರದ್ದುಪಡಿಸುತ್ತಾರೆ ಎಂದು ಅಪಪ್ರಚಾರ ಮಾಡಿದ ರಾಹುಲ್ ಗಾಂಧಿರವರು, ಇದೀಗ ದಲಿತರ ಮೀಸಲಾತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ವಿದೇಶದಲ್ಲಿ ಮಾತನಾಡಿರುವುದು ಸಂವಿಧಾನ ವಿರೋಧಿ ಹೇಳಿಕೆಯಾಗಿದೆ. ಇದಲ್ಲದೆ ವಿದೇಶಗಳಿಗೆ ಅವರು ಹೋದಾಗ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವುದು ಸಾಮಾನ್ಯವಾಗಿದೆ. ಇದನ್ನು ಭಾರತೀಯ ಜನತಾ ಪಕ್ಷ ಉಗ್ರವಾಗಿ ಖಂಡಿಸುತ್ತದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಕೂಡಲೆ ರಾಹುಲ್ ಗಾಂಧಿಯವರ ಸಂಸದ ಸ್ಥಾನವನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಸಕಲೇಶಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿ
ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡಾಕೂಟ ಹಾಗೂ ಪ್ರತಿಭಾ ಕಾರಂಜಿಗಳು ಮಹತ್ವದ ಪಾತ್ರ ವಹಿಸುತ್ತವೆ. ಅವರಲ್ಲಿನ ವಿಶೇಷ ಪ್ರತಿಭೆಯನ್ನು ಗುರುತಿಸಿ ನಿರ್ದಿಷ್ಟ ಕ್ಷೇತ್ರದಲ್ಲಿ ಸಾಧನೆಗೈಯಲು ಇಲಾಖೆಯ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ತೀರ್ಪುಗಾರರು ನಿಷ್ಪಕ್ಷಪಾತವಾಗಿ ನಿಜವಾದ ಪ್ರತಿಭೆಯನ್ನು ಗುರುತಿಸಿ ಆಯ್ಕೆ ಮಾಡಿ ತಾಲೂಕು ಹಂತಕ್ಕೆ ಕಳುಹಿಸಿ. ಗುಣಾತ್ಮಕತೆಯನ್ನು ಕಾಯ್ದುಕೊಳ್ಳಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ.ಕೃಷ್ಣೇಗೌಡ ಸಲಹೆ ನೀಡಿದರು.
ಅಂಗವಿಕಲರಿಗೆ ತ್ರಿಚಕ್ರದ ಸ್ಕೂಟರ್‌ ವಿತರಣೆ
ತಾಲೂಕಿನ ತೇಜೂರು ಶ್ರೀ ಸಿದ್ಧರಾಮೇಶ್ವರ ಮಠದ ಮಠಧೀಶರಾದ ಪೂಜ್ಯ ಶ್ರೀ ಕಲ್ಯಾಣಸ್ವಾಮಿಗಳ ಉಪಸ್ಥಿತಿಯಲ್ಲಿ ತಾಲೂಕು ಪಂಚಾಯಿತಿ ಅನುದಾನದಲ್ಲಿ ಎರಡು ತ್ರಿಚಕ್ರ ಸ್ಕೂಟರ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಎ.ಮಂಜು ಮಾತನಾಡಿದರು. ಅಗತ್ಯ ಸೌಲಭ್ಯ ಕಲ್ಪಿಸಿ, ಸ್ವಾಭಿಮಾನದ ಬದುಕನ್ನು ರೂಪಿಸಿಕೊಳ್ಳಲು ನೆರವಾಗುವ ದೃಷ್ಠಿಯಲ್ಲಿ ವಿಶೇಷ ಚೇತನರಿಗೆ ಮೂರು ಚಕ್ರದ ಸ್ಕೂಟರ್ ನೀಡಲಾಗುತ್ತಿದ್ದು, ಇದರ ಸದುಪಯೋಗಪಡಿಸಿಕೊಂಡು ಜೀವನ ರೂಪಿಸಿಕೊಳ್ಳುವಂತೆ ಶಾಸಕ ಎ.ಮಂಜು ಸಲಹೆ ನೀಡಿದರು.
ಖಾಸಗಿ ಕಾಲೇಜುಗಳ ಮಾಲೀಕರೊಂದಿಗೆ ಸರ್ಕಾರ ಶಾಮೀಲು
ಕಾಲೇಜುಗಳು ಆರಂಭವಾಗಿ ಈಗಾಗಲೇ ಒಂದೂವರೆ ತಿಂಗಳು ಕಳೆಯುತ್ತಿದ್ದರೂ ಈವರೆಗೆ ಸಮರ್ಪಕ ಬೋಧಕ ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಲು ಆಗಿಲ್ಲ. ಪ್ರಾಂಶುಪಾಲರೇ ಕಸ ಗುಡಿಸುವಂತಾಗಿದೆ. ಸರ್ಕಾರಕ್ಕೆ ಏನು ಕಾಯಿಲೆ ಹಿಡಿದಿದೆ. ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರು ಇಲ್ಲ ಎಂದು ವಿದ್ಯಾರ್ಥಿಗಳು ಖಾಸಗಿ ಕಾಲೇಜಿಗೆ ಹೋಗುತ್ತಾರೆ. ಅರೆಕಾಲಿಕ ಉಪನ್ಯಾಸಕರನ್ನೋ ಇಲ್ಲವೇ ಕಾಯಂ ಉಪನ್ಯಾಸಕರನ್ನಾದರೂ ಹಾಕಿ. ಬಡವರ ಬಗ್ಗೆ ಮೊದಲು ಚಿಂತನೆ ಮಾಡಿ. ಬಡವರ ಮಕ್ಕಳು ಕಲಿಯುವ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಬದಲಾಗಿ ಖಾಸಗಿ ಶಾಲೆಗಳ ಜೊತೆ ಶಾಮೀಲಾಗಿರುವ ಸರ್ಕಾರ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಮುಗಿಯುವುದನ್ನು ಕಾಯುತ್ತಿದೆ ಎಂದು ಶಾಸಕ ರೇವಣ್ಣ ಆರೋಪಿಸಿದರು.
ಮಾಡಾಳು ಶ್ರೀ ಮೂಲ‌ಸ್ವರ್ಣ ಗೌರಮ್ಮನವರ ದರ್ಶನಕ್ಕೆ ಭಕ್ತ ಸಾಗರ
ಕೋಡಿಮಠ ಮಹಾಸಂಸ್ಥಾನ ಪೀಠಾಧ್ಯಕ್ಷರಾದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಮಾಡಾಳು ಗ್ರಾಮ ಯರೇಹಳ್ಳಿ ರಸ್ತೆ ಶ್ರೀ ಚನ್ನಬಸವೇಶ್ವರ ಚಲನಚಿತ್ರ ಮಂದಿರ ಹತ್ತಿರನೂತನವಾಗಿ ನಿರ್ಮಾಣಗೊಂಡಿರುವ ದೇವಾಲಯದಲ್ಲಿ ನಿರ್ಮಿಸಲಾಗಿರುವ ಶ್ರೀ ಮೂಲ ಸ್ವರ್ಣಗೌರಿ ಅಮ್ಮನವರ ಇತಿಹಾಸದ ಹೇಳಿಕೆ ನಂತರ ಪ್ರತಿದಿನ‌ ಸಾವಿರಾರು ಭಕ್ತರು ಶ್ರೀಕ್ಷೇತ್ರಕ್ಕೆ ಆಗಮಿಸಿ ಚಿನ್ನದ ಮೂಗುತಿ ಸಹಿತ ಅಮ್ಮನವರನ್ನು ದರ್ಶನ ಮಾಡುತ್ತಿದ್ದಾರೆ. ತಪಸ್ವಿ ಶಿವಲಿಂಗಜ್ಜಯ್ಯ ಸುಮಾರು 170 ವರ್ಷಗಳ ಹಿಂದೆ ನೀಡಿದ್ದ ಮೂಗುತಿ ಧರಿಸುತ್ತಿರುವ ಅಮ್ಮನವರ ದರ್ಶನದಿಂದ ಕಷ್ಟ ಕಾರ್ಪಣ್ಯಗಳು ಬಗೆಹರಿಯುತ್ತದೆ ಎಂದು ಭಕ್ತ ಕೋಟಿಯ ನಂಬಿಕೆಯಾಗಿದೆ.
ಚನ್ನಾಂಬಿಕ ಥಿಯೇಟರ್‌ ಎದುರು ಮತ್ತೊಂದು ಅಂಡರ್‌ಪಾಸ್‌
ಪಟ್ಟಣದ ಒಳಗಿರುವ ಬಿಎಚ್ ರಸ್ತೆ ವಾಹನ ದಟ್ಟ ಸಂಚಾರ ಇದ್ದು, ದ್ವಿಮುಖ ರಸ್ತೆಯಾಗಿ ಅಗಲೀಕರಣಗೊಳಿಸುವ ಕಾಮಗಾರಿ ಪ್ರಾರಂಭಿಸಲಾಗುವುದು. ಹೇಮಾವತಿ ವೃತ್ತದ ಆಂಜನೇಯ ರೈಸ್‌ಮಿಲ್ ಸಮೀಪ ಅಂಡರ್‌ಪಾಸ್‌ನಿಂದ ಪಶುವೈದ್ಯಕೀಯ ಆಸ್ಪತ್ರೆ ಮುಂಭಾಗದ ರಸ್ತೆ ವಿಭಜಕಕ್ಕೆ ಸಂಪರ್ಕಿಸಲಾಗುವುದು. ನಂತರ ರೈಲ್ವೇ ನಿಲ್ದಾಣದ ಮುಂಭಾಗದ ಬೈಪಾಸ್ ಅಗಲೀಕರಣಗೊಳಿಸಿ ದ್ವಿಮುಖ ರಸ್ತೆಯನ್ನಾಗಿಸಿ ಹಾಸನ ಕಡೆಗಿನ ರೈಲ್ವೇ ಮೇಲ್ಸೇತುವೆವರೆಗೂ ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಪಟ್ಟಣದ ಚೆನ್ನಾಂಬಿಕ ವೃತ್ತದ ಸಮೀಪ ಹಿಂದಿನ ರೈಲ್ವೆ ಹಳಿಯ ಅಡಿಯಲ್ಲಿ ಸಾರ್ವಜನಿಕರ ಓಡಾಟಕ್ಕೆ ಇನ್ನೊಂದು ಅಂಡರ್‌ಪಾಸ್ ನಿರ್ಮಿಸಲು ಹಣ ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.
ಶಾಸಕರ ವಿರೋಧಿ ನೀತಿ ಖಂಡಿಸಿ ಅಡ್ಡೆಗಾರರ ಪ್ರತಿಭಟನೆ
ಚನ್ನಕೇಶವಸ್ವಾಮಿ ದೇವಸ್ಥಾನದ ಮುಂಭಾಗ ಪುರಾತನ ಕಾಲದಿಂದಲೂ ಸೇವೆ ಸಲ್ಲಿಸುತ್ತಿರುವ ಅಡ್ಡೆಗಾರರ ವಿರುದ್ಧ ಟೆಂಡರ್ ಪ್ರಕ್ರಿಯೆ ಕರೆದಿರುವುದನ್ನು ವಿರೋಧಿಸಿ ಅಡ್ಡೆಗಾರರು ಹಾಗೂ ೮ ಮೂಲೆಯ ನಾಡ ಪಟೇಲರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ನಡೆಸಿದರು. ಶ್ರೀ ಚನ್ನಕೇಶವ ಸ್ವಾಮಿ ದೇಗುಲದ ತಲೆತಲಾಂತರದಿಂದ ನಡೆದುಕೊಂಡುಬಂದ ಸಂಪ್ರದಾಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಭಕ್ತರಿಗೆ ಹಾಗೂ ಅಡ್ಡೆಗಾರರಿಗೆ ತೊಂದರೆ‌ ಕೊಡುತ್ತಿರುವ ಶಾಸಕರ ವಿರುದ್ಧ ತಾಲೂಕಿನ ಜನತೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪುರಸಭೆ ಅಧ್ಯಕ್ಷ ಎ.ಆರ್‌ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ವಿಕಾಸಪರ್ವ ಚಿತ್ರ ರಾಜ್ಯಾದ್ಯಂತ ಬಿಡುಗಡೆ
ವಿಕಾಸಪರ್ವ ಸಿನಿಮಾ ತುಂಬಾ ಸೂಕ್ಷ್ಮ ವಿಷಯ ಆಧಾರಿತ ಸಿನಿಮಾವಾಗಿದೆ. ಸಿನಿಮಾ ನೋಡಿದವರು ಇದು ನನ್ನ ಜೀವನದ ಕಥೆಯನ್ನ ಸಿನಿಮಾ ಮಾಡಿ ತೆರೆಯ ಮೇಲೆ ಬರುತ್ತಿದೆ ಎಂಬಂತೆ ಭಾವಿಸುತ್ತಾರೆ. ಸಿನಿಮಾದಲ್ಲಿ ಎಲ್ಲಿಯೂ ಅಬ್ಬರ ಇಲ್ಲ, ಮೂರು ಹಾಡುಗಳು, ಎರಡು ಫೈಟ್ ಗಳು ಇವೆ. ಸಕಲೇಶಪುರ ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಸಿನಿಮಾ ಚಿತ್ರೀಕರಿಸಲಾಗಿದೆ. ಜನರು ಸಿನಿಮಾ ನೋಡಿ ಹಾರೈಸುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ಎಂದು ನಾಯಕ ನಟ ರೋಹಿತ್ ನಾಗೇಶ್
ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ನೆಮ್ಮದಿ: ಶಾಸಕ ಎಚ್.ಕೆ.ಸುರೇಶ್
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ದೈಹಿಕ ಹಾಗೂ ಮಾನಸಿಕ ನೆಮ್ಮದಿಗೆ ಕ್ರೀಡೆ ಮತ್ತು ಯೋಗದ ಅವಶ್ಯಕತೆ ಇದೆ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಬೇಲೂರಿನಲ್ಲಿ ಕ್ರೀಡಾಕೂಟದಲ್ಲಿ ಮಾತನಾಡಿದರು.
ಕ್ರೀಡೆಗಳಿಂದ ಉತ್ತಮ ಬಾಂಧವ್ಯ ವೃದ್ಧಿ: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಿ.ಎಂ.ಮಹಾಲಿಂಗಯ್ಯ
ಕ್ರೀಡಾಕೂಟದಲ್ಲಿ ಯಾರೇ ಗೆದ್ದರೂ ನಮ್ಮ ವಿದ್ಯಾರ್ಥಿಗಳು ಎಂಬ ಮನಸ್ಥಿತಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಲ್ಲಿ ಇರಬೇಕು. ಆದ್ದರಿಂದ ಎಲ್ಲರೂ ಸೋಲು ಗೆಲುವನ್ನು ಸಮಾನಭಾವದಿಂದ ಸ್ವೀಕಾರ ಮಾಡುವ ಜತೆಗೆ ಕ್ರೀಡೆಯನ್ನು ಗೆಲ್ಲಿಸಿ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕ ಸಿ.ಎಂ.ಮಹಾಲಿಂಗಯ್ಯ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 509
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved