ಎಲ್ಲಾ ಕಾಲದಲ್ಲೂ ಮೀರ್ ಸಾಧಿಕ್‌ನಂಥವರು ಇರುತ್ತಾರೆಎಲ್ಲಾ ಕಾಲಘಟ್ಟದಲ್ಲಿಯೂ ಮೀರ್ ಸಾಧಿಕ್, ಮಲ್ಲಪ್ಪಶೆಟ್ಟಿ ಅಂತಹವರು ಇದ್ದೇ ಇರುತ್ತಾರೆ. ಸಿದ್ಧರಾಮಯ್ಯನವರು ಮೀರ್ ಸಾಧಿಕ್, ಮಲ್ಲಪ್ಪಶೆಟ್ಟಿ ಅಂತಹವರು ನಮ್ಮಲ್ಲೇ ಇದ್ದಾರೆ ಎಂದು ಹೇಳಿರುವುದು ಈ ಸರ್ಕಾರದ ಬಗ್ಗೆ ಅಲ್ಲ. ಈ ರಾಜಕೀಯ ಸನ್ನಿವೇಶಕ್ಕೆ ಅದನ್ನು ಹೋಲಿಕೆ ಮಾಡಲು ಹೋಗಬೇಡಿ ಎಂದು ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೆ.ಎನ್.ರಾಜಣ್ಣ ಹೇಳಿದರು.