ಅವೈಜ್ಞಾನಿಕ ಡೀಮ್ಡ್ ಅರಣ್ಯದ ಬಗ್ಗೆ ಪಶ್ಚಿಮಘಟ್ಟ ನಿವಾಸಿಗಳ ಸಭೆಸಕಲೇಶಪುರ ತಾಲೂಕಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಡೀಮ್ಡ್ ಅರಣ್ಯದ ನೆಪ ಹೇಳಿ ರೈತರಿಗೆ ಕಿರುಕುಳ ನೀಡುತ್ತಿರುವ ಪ್ರಕರಣ ಹೆಚ್ಚುತ್ತಿದ್ದು ಇದನ್ನು ಸಹಿಸಲು ಇನ್ನೂ ಸಾಧ್ಯವಿಲ್ಲ. ಕುಡಿಯುವ ನೀರು ಯೋಜನೆ, ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ, ಸರ್ಕಾರದ ಅಭಿವೃದ್ಧಿ ಕೆಲಸ ಸಹ ಮಾಡಲು ಅರಣ್ಯ ಇಲಾಖೆ ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ತಾಲೂಕಿನ ಎಲ್ಲಾ ರೈತರು ಬೆಳೆಗಾರ ಸಂಘಟನೆಗಳು, ರಾಜಕೀಯ ಮುಖಂಡರು ಪರಿಸರವಾದಿಗಳು, ಶಾಸಕರ ನೇತೃತ್ವದಲ್ಲಿ ಪಕ್ಷಾತೀತವಾಗಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಎಚ್ ಎನ್ ವಿಶ್ವನಾಥ್ ತಿಳಿಸಿದರು.