ರಾಹುಲ್ ಗಾಂಧಿ ರಾಜ್ಯಕ್ಕೆ ಬಂದರೆ ಎನ್‌ಡಿಎಗೆ ಹೆಚ್ಚು ಸ್ಥಾನ: ಪ್ರಜ್ವಲ್ ರೇವಣ್ಣರಾಹುಲ್ ಗಾಂಧಿ ರಾಜ್ಯಕ್ಕೆ ಪ್ರಚಾರಕ್ಕಾಗಿ ಬಂದರೆ ಕೇಂದ್ರದಲ್ಲಿ ಎನ್‌ಡಿಎ ನಾಲ್ಕು ನೂರಲ್ಲ, ಐನೂರು ಸ್ಥಾನವನ್ನು ಗೆಲ್ಲುತ್ತದೆ. ಅವರು ಬಂದರೆ ಏನೂ ಬದಲಾವಣೆ ಆಗುವುದಿಲ್ಲ ಎಂದು ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.