ನುಗ್ಗೇಹಳ್ಳಿಯನ್ನು ಧಾರ್ಮಿಕ ಪ್ರವಾಸಿ ಕೇಂದ್ರ ಮಾಡುವಂತೆ ಒತ್ತಾಯನುಗ್ಗೇಹಳ್ಳಿ ಗ್ರಾಮವು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದ್ದು, ಗ್ರಾಮದಲ್ಲಿ ಕ್ರಿ. ಶ. 1543 ಮತ್ತು 1249 ಹಾಗೂ 1246ರಲ್ಲಿ ಶ್ರೀ ಚಂದ್ರಮೌಳೇಶ್ವರ, ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ, ಶ್ರೀ ಸದಾಶಿವ ಸ್ವಾಮಿ, ಶ್ರೀ ಜಯಗೊಂಡೇಶ್ವರ ದೇವಾಲಯಗಳನ್ನು ಆಗಿನ ವಿಜಯನಗರ ಸಾಮ್ರಾಜ್ಯದ ದೊರೆಗಳು ನಿರ್ಮಾಣ ಮಾಡಿರುವ ಬಗ್ಗೆ ಪುರಾವೆಗಳು ದೊರೆತಿದ್ದು, ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಪ್ರವಾಸಿ ಧಾರ್ಮಿಕ ಕ್ಷೇತ್ರದಂತೆ ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದರೆ ಈ ದೇವಾಲಯಗಳು ಇನ್ನೂ ಹೆಚ್ಚು ಪ್ರಸಿದ್ಧಿ ಹೊಂದುವುದರ ಜೊತೆಗೆ ಈ ಭಾಗದ ಇತಿಹಾಸ ಎಲ್ಲರಿಗೂ ತಿಳಿಯುತ್ತದೆ.