ಪರಿಸರ ರಕ್ಷಣೆಯಲ್ಲಿ ಸಾರ್ವಜನಿಕರೂ ಪಾಲ್ಗೊಳ್ಳಬೇಕುಅರಕಲಗೂಡು ದಸರಾ ಉತ್ಸವದ ಪ್ರಯುಕ್ತ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಸೋಮವಾರ ಅರಣ್ಯ ಇಲಾಖೆ ಏರ್ಪಡಿಸಿದ್ದ ಪರಿಸರ ದಸರಾ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರದ ಸಮತೋಲನ ಕಾಯ್ದುಕೊಳ್ಳದಿದ್ದರೆ ಪ್ರಕೃತಿ ವಿಕೋಪದಿಂದ ಸಂಭವಿಸುತ್ತಿರುವ ಘಟನೆಗಳು ಸಾಕ್ಷಿಯಾಗಿದೆ. ಉತ್ತಮ ಪರಿಸರವನ್ನು ರೂಪಿಸುವ ಹೊಣೆ ಸಾಮಾಜಿಕ ಜವಾಬ್ದಾರಿಯಾಗಿದೆ, ಮಕ್ಕಳಿಗೆ ಬಾಲ್ಯದಿಂದಲೇ ಪರಿಸರದ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದರು.